ಕರ್ನಾಟಕ

karnataka

ETV Bharat / bharat

ರಾಜಸ್ಥಾನಕ್ಕೆ ನಡ್ಡಾ ಆಗಮನ: ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲಿರುವ ರಾಷ್ಟ್ರಾಧ್ಯಕ್ಷ - ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ

ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲು ರಾಜಸ್ಥಾನಕ್ಕೆ ಬಂದ ಜೆಪಿ ನಡ್ಡಾರಿಗೆ ಪಕ್ಷದ ನಾಯಕರು, ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ.

BJP chief Nadda arrives in Rajasthan
ರಾಜಸ್ಥಾನಕ್ಕೆ ನಡ್ಡಾ ಆಗಮನ

By

Published : Mar 2, 2021, 1:13 PM IST

ಜೈಪುರ (ರಾಜಸ್ಥಾನ): ಪಕ್ಷದ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಇಂದು ರಾಜಸ್ಥಾನಕ್ಕೆ ಆಗಮಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜಸ್ಥಾನದ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಮತ್ತು ಇತರ ನಾಯಕರು ವಿಮಾನ ನಿಲ್ದಾಣದಲ್ಲಿ ನಡ್ಡಾ ಅವರನ್ನು ಬರಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಅಸ್ಸೋಂನಲ್ಲಿ ಬುಡಕಟ್ಟು ಜನರ ನೃತ್ಯಕ್ಕೆ ಹೆಜ್ಜೆ ಹಾಕಿದ ಪ್ರಿಯಾಂಕಾ ಗಾಂಧಿ

ವಿಮಾನ ನಿಲ್ದಾಣದ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಪಕ್ಷದ ಕಾರ್ಯಕರ್ತರು ನಡ್ಡಾರಿಗೆ ಭರ್ಜರಿ ಸ್ವಾಗತ ಕೋರಿದರು. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಇತರ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.

ಏರ್​ಪೋರ್ಟ್​ನಿಂದ ಬಿರ್ಲಾ ಸಭಾಂಗಣಕ್ಕೆ ತೆರಳಿರುವ ನಡ್ಡಾ, ಕಾರ್ಯಕಾರಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು ಮತ್ತು ಜಿಲ್ಲಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ.

ABOUT THE AUTHOR

...view details