ನವದೆಹಲಿ:ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರ ನಡೆದ ಭಾರತೀಯ ಜನತಾ ಪಕ್ಷದ ಕೋರ್ ಕಮಿಟಿಯ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರು ಕ್ಷೇತ್ರಗಳ ಕ್ಷೇತ್ರವಾರು ಪರಾಮರ್ಶೆ ನಡೆಸಿದರು. ಪ್ರಾದೇಶಿಕ ಉಸ್ತುವಾರಿಗಳಿಂದ 10 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಅಲ್ಲಿನ ವಾಸ್ತವತೆಯ ಬಗ್ಗೆ ಪ್ರಾದೇಶಿಕ ಉಸ್ತುವಾರಿಗಳಿಂದ ಅಭಿಪ್ರಾಯಗಳನ್ನು ಪಡೆದುಕೊಂಡರು.
ಫೆಬ್ರವರಿ 10 ರಂದು ಪ್ರಾರಂಭವಾಗಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಲು ಮತ್ತು ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಲು ರಾಷ್ಟ್ರ ರಾಜಧಾನಿಯಲ್ಲಿ ಸಭೆ ನಡೆಸಲಾಯಿತು.
ಚುನಾವಣಾ ಪ್ರಚಾರದ ರೂಪುರೇಷೆಗಳ ಕುರಿತು ಚರ್ಚೆ:
ಮೂಲಗಳ ಪ್ರಕಾರ, ಚುನಾವಣಾ ಕಾರ್ಯತಂತ್ರಕ್ಕೆ ಸಂಬಂಧಿಸಿದ ವಿವಿಧ ಅಂಶಗಳ ಹೊರತಾಗಿ, ಜನವರಿ 15 ರವರೆಗೆ ರ‍್ಯಾಲಿ, ರೋಡ್ ಶೋ ಮತ್ತು ಇತರ ಕಾರ್ಯಕ್ರಮಗಳನ್ನು ನಿಷೇಧಿಸಿ ಚುನಾವಣಾ ಆಯೋಗದ ಆದೇಶದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ಭವಿಷ್ಯದ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಯಿತು.
ಅಮಿತ್ ಶಾ, ಕೆಲವು ನಾಯಕರೊಂದಿಗೆ ಪ್ರತ್ಯೇಕ ಸಭೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚುನಾವಣಾ ಕಾರ್ಯತಂತ್ರ ಮತ್ತು ಪಕ್ಷದಲ್ಲಿನ ಸದ್ಯದ ಏರಿಳಿತಗಳ ಕುರಿತು ಪಕ್ಷದ ಮುಖಂಡರೊಂದಿಗೆ ಶಾ ಮಾತನಾಡಿದರು.