ಕರ್ನಾಟಕ

karnataka

ETV Bharat / bharat

ಬಡವರ ಸಬಲೀಕರಣಕ್ಕಾಗಿ ಬಿಜೆಪಿ ಶ್ರಮಿಸುತ್ತಿದ್ದರೆ, ತಮ್ಮ ಕುಟುಂಬಕ್ಕಾಗಿ ಪ್ರತಿಪಕ್ಷಗಳು ಶ್ರಮಿಸುತ್ತಿವೆ: ನಡ್ಡಾ - ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ

ಹೈದರಾಬಾದ್​ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗಿಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮಾತನಾಡಿದರು. ಈ ವೇಳೆ ಪ್ರತಿಪಕ್ಷಗಳ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

Nadda at BJP meet
Nadda at BJP meet

By

Published : Jul 2, 2022, 10:14 PM IST

ಹೈದರಾಬಾದ್​(ತೆಲಂಗಾಣ):ಮುತ್ತಿನ ನಗರಿಯಲ್ಲಿ ಶನಿವಾರದಿಂದ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿದ್ದು, ಪ್ರಮುಖ ನಾಯಕರು ಭಾಗಿಯಾಗಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮಾತನಾಡಿದ್ದು, ಬಿಜೆಪಿ ಬಡವರ ಸಬಲೀಕರಣಕ್ಕಾಗಿ ಕೆಲಸ ಮಾಡ್ತಿದ್ದರೆ, ಪ್ರತಿ ಪಕ್ಷಗಳು ತಮ್ಮ ಕುಟುಂಬಗಳ ಉದ್ಧಾರಕ್ಕಾಗಿ ಕೆಲಸ ಮಾಡುತ್ತಿದ್ದು, ಭ್ರಷ್ಟಾಚಾರದಲ್ಲಿ ಮಗ್ನವಾಗಿವೆ ಎಂದು ಗಂಭೀರ ಆರೋಪ ಮಾಡಿದರು.

ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿರುವ ಭಾರತೀಯ ಜನತಾ ಪಾರ್ಟಿ, ಜನ ಸಾಮಾನ್ಯರಿಗೋಸ್ಕರ ಪ್ರಮುಖ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ, ಆ ಯೋಜನೆ ಜನರಿಗೆ ತಲುಪದ ರೀತಿಯಲ್ಲಿ ತಡೆಯುವ ಕೆಲಸಗಳನ್ನ ಪ್ರತಿಪಕ್ಷಗಳು ಮಾಡ್ತಿವೆ ಎಂದು ಆರೋಪಿಸಿದರು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮೋದಿ ಭಾಗಿ

ಇದನ್ನೂ ಓದಿ:ಉದಯಪುರ ಟೈಲರ್ ಹತ್ಯೆ ಪ್ರಕರಣ.. ಕೋರ್ಟ್​ಗೆ ಬಂದ ಆರೋಪಿಗಳ ಮೇಲೆ ಹಲ್ಲೆ, ಬಟ್ಟೆ ಹರಿದು ಆಕ್ರೋಶ

ಹೈದರಾಬಾದ್​ನಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿರುವ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರನ್ನ ವಿರೋಧಿಸುವ ಉತ್ಸಾಹದಲ್ಲಿ ಪ್ರತಿಪಕ್ಷಗಳು ಸರ್ಕಾರದ ವಿವಿಧ ಯೋಜನೆ ಬಗ್ಗೆ ಕೆಟ್ಟ ಮಾಹಿತಿ ಹರಿಬಿಡುತ್ತಿವೆ. ಇದರ ಜೊತೆಗೆ ತಮ್ಮ ತಮ್ಮ ಕುಟುಂಬಗಳ ಸಬಲೀಕರಣಕ್ಕಾಗಿ ಕೆಲಸ ಮಾಡಿಕೊಳ್ಳುತ್ತಿವೆ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿಯಾಗಿ ನರೇಂದ್ರ ಮೋದಿ 8 ವರ್ಷ ಉತ್ತಮ ಆಡಳಿತ ನೀಡಿದ್ದು, 20 ವರ್ಷಗಳ ಕಾಲ ಸಾರ್ವಜನಿಕ ಸೇವೆಯಲ್ಲಿ ಕೆಲಸ ಮಾಡಿದ್ದಾರೆ. ಅವರ ನಾಯಕತ್ವ ನಿಜಕ್ಕೂ ಶ್ಲಾಘನೀಯ ಎಂದ ನಡ್ಡಾ, ಸತತ ಚುನಾವಣೆಗಳಲ್ಲಿ ಅವರಿಗೆ ಸಿಗುತ್ತಿರುವ ಜನಬೆಂಬಲ ನಿಜಕ್ಕೂ ಅಮೋಘ ಎಂದರು.

ಇದೇ ವೇಳೆ ಮಾತನಾಡಿದ ಸಚಿವೆ ಸ್ಮೃತಿ ಇರಾನಿ, ತೆಲಂಗಾಣಕ್ಕೆ ಬಂದ ಪ್ರಧಾನಿ ಅವರನ್ನ ಬರಮಾಡಿಕೊಳ್ಳಲು ಮುಖ್ಯಮಂತ್ರಿ ಚಂದ್ರಶೇಖರ್​ ರಾವ್​​ ಆಗಮಿಸದ ಮೂಲಕ ಕೇವಲ ಒಬ್ಬ ವ್ಯಕ್ತಿ ಅಲ್ಲ, ಇಡೀ ದೇಶವನ್ನ ಅವಮಾನಿಸಿದ್ದಾರೆ. ವಿವಿಧ ಪಕ್ಷಗಳ ನಾಯಕರು ಗೌರವದಿಂದ ಪ್ರಧಾನಿ ಅವರನ್ನ ಭೇಟಿ ಮಾಡಿದ್ದಾರೆ. ಆದರೆ, ಕೆಸಿಆರ್​ ಈ ಕೆಲಸ ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಭಾಗಿಯಾಗಿದ್ದಾರೆ.

ABOUT THE AUTHOR

...view details