ನವದೆಹಲಿ:ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮತ್ತು ಗೆಲುವಿನ ಕಾರ್ಯತಂತ್ರ ರೂಪಿಸುವಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆ ಮತ್ತಷ್ಟು ಬಿರುಸುಗೊಂಡಿದೆ. ಬುಧವಾರ ಪ್ರತಿಪಕ್ಷಗಳು ಸಭೆ ಸೇರಿ ಸರ್ವ ಸಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿವೆ. ಇದೀಗ ಈ ಸಭೆಯಿಂದ ದೂರ ಉಳಿದ ಎನ್‌ಡಿಎಯೇತರ ಪಕ್ಷಗಳ ಮೇಲೆ ಆಡಳಿತಾರೂಢ ಬಿಜೆಪಿ ಚಿತ್ತ ಹರಿಸಿದೆ.
ರಾಷ್ಟ್ರಪತಿ ಚುನಾವಣೆ ಸಂಬಂಧ ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಬುಧವಾರ ಪ್ರತಿಪಕ್ಷಗಳ ನಾಯಕರ ಸಭೆ ನಡೆಸಿದ್ದರು. ಆದರೆ, ಈ ಸಭೆಯಿಂದ ಪ್ರಮುಖ ಪಕ್ಷಗಳಾದ ಒಡಿಶಾ ಸಿಎಂ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ (ಬಿಜೆಡಿ), ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಆಪ್), ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಮತ್ತು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಹಾಗೂ ಪಂಜಾಬ್ನ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಪಕ್ಷಗಳು ಹೊರಗುಳಿದಿದ್ದವು.