ನವದೆಹಲಿ: ಆಪ್ನ ಸೂರತ್ (ಪೂರ್ವ) ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಬುಧವಾರ ಆರೋಪಿಸಿದ್ದಾರೆ. ಕಾಂಚನ್ ಜರಿವಾಲಾ ಮತ್ತು ಅವರ ಕುಟುಂಬ ಮಂಗಳವಾರದಿಂದ ನಾಪತ್ತೆಯಾಗಿದೆ. ಆರ್‌ಒ ಕಚೇರಿಯಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು ಎಂದು ಅವರು ತಿಳಿಸಿದರು.
ನಮ್ಮ ಅಭ್ಯರ್ಥಿಯನ್ನು ಬಿಜೆಪಿ ಅಪಹರಿಸಿದೆ: ಸಿಸೋಡಿಯಾ ಗಂಭೀರ ಆರೋಪ - Sisodia
ಆಮ್ ಆದ್ಮಿ ಪಾರ್ಟಿಯ ಸೂರತ್ (ಪೂರ್ವ) ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ
ಇದನ್ನೂ ಓದಿ:ಡಿಸಿಎಂ ಮನೀಶ್ ಸಿಸೋಡಿಯಾ ಕೇಳಿದ ಕಡತ ನೀಡಲು ಒಪ್ಪದ ದೆಹಲಿ ಕಾನೂನು ಇಲಾಖೆ?
ಬಿಜೆಪಿ ನಾಯಕರು ಅವರ ನಾಮಪತ್ರ ತಿರಸ್ಕಾರಗೊಳ್ಳುವಂತೆ ಪ್ರಯತ್ನಿಸಿದರು. ನಂತರ ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಿದ್ದಾರೆ. ಇದು ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಸಿಸೋಡಿಯಾ ದೂರಿದ್ದಾರೆ.