ಕೊಯಮತ್ತೂರು: ಕಾರಿಗೆ ಅಳವಡಿಸಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಮತ್ತು ಕೆಲ ಹಿಂದೂ ಸಂಘಟನೆಗಳು ಅಕ್ಟೋಬರ್ 31 ರಂದು ಕೊಯಮತ್ತೂರಿನಲ್ಲಿ 12 ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿವೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಸಿಪಿ ರಾಧಾಕೃಷ್ಣನ್, 1998ರಲ್ಲಿ ಸರಣಿ ಸ್ಫೋಟಕ್ಕೆ ಸಾಕ್ಷಿಯಾಗಿದ್ದ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಭಾರಿ ಅನಾಹುತ ತಪ್ಪಿದೆ. ಈ ಹಿಂದೆ ಜಿಲ್ಲೆಯಲ್ಲಿ ಬಿಜೆಪಿ ನಾಯಕರ ಕಚೇರಿ ಮತ್ತು ಮನೆಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಘಟನೆಗಳನ್ನು ಆಡಳಿತಾರೂಢ ಡಿಎಂಕೆ ಪಕ್ಷ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಆರೋಪಿಸಿದ ಅವರು, ಸರ್ಕಾರದ ಗಮನ ಸೆಳೆಯಲು ಬಿಜೆಪಿ ಮತ್ತು ಹಿಂದೂ ಮುನ್ನಾನಿಯಂತಹ ಸಮಾನ ಮನಸ್ಕ ಸಂಘಟನೆಗಳು ಅಕ್ಟೋಬರ್ 31 ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಬಂದ್ ಆಚರಿಸಲು ನಿರ್ಧರಿಸಿವೆ ಎಂದರು.
ಇದನ್ನೂ ಓದಿ:ಕೊಯಮತ್ತೂರು ಸಿಲಿಂಡರ್ ಸ್ಪೋಟ ಪ್ರಕರಣ: ಎನ್ಐಎ ತನಿಖೆಗೆ ಸ್ಟಾಲಿನ್ ಶಿಫಾರಸು