ನವದೆಹಲಿ :ಲಖಿಂಪುರ ಖೇರಿಗೆ ಭೇಟಿ ನೀಡಲು ಪ್ರಯತ್ನಿಸುತ್ತಿರುವ ಕೈ ನಾಯಕರನ್ನ ತಡೆದಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ರಾಜೀವ್ ಶುಕ್ಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ರಾಜೀವ್ ಶುಕ್ಲಾ ಸೋಮವಾರ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯನ್ನು ರೈತರ ಶತ್ರು ಎಂದು ಕರೆದರು. ಅಲ್ಲದೇ, ಸೀತಾಪುರ ಜಿಲ್ಲೆಯ ಹರ್ಗಾಂವ್ನಿಂದ ಪ್ರಿಯಾಂಕಾ ಗಾಂಧಿ ಮತ್ತು ರಾಜ್ಯಸಭಾ ಸಂಸದ ದೀಪೇಂದರ್ ಹೂಡಾ ಅವರನ್ನು ಬಂಧಿಸಿರುವುದಕ್ಕೆ ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ನಾವು ದುಃಖದ ಸಮಯದಲ್ಲಿ ಕುಟುಂಬಗಳನ್ನು ಭೇಟಿಯಾಗಲು ಬಯಸುತ್ತೇವೆ. ಪಕ್ಷವು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಿಡುಗಡೆ ಮಾಡುವುದು ಮತ್ತು ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಲು ಲಖಿಂಪುರ ಖೇರಿಗೆ ಭೇಟಿ ನೀಡಲು ಅವಕಾಶ ನೀಡುವುದು ಸೇರಿದಂತೆ ಐದು ಬೇಡಿಕೆಗಳನ್ನು ಇರಿಸಿದ್ದೇವೆ ಎಂದು ದೀಪೇಂದರ್ ಹೂಡಾ ಹೇಳಿದರು.