ಚೆಂಗಲ್ಪೇಟ್:ವೆಲ್ ಯಾತ್ರೆಗೆ ತೆರಳುತ್ತಿದ್ದ ವೇಳೆ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಸಂಚರಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿರುವ ಘಟನೆ ಮಧುರಂಥಗಂ ಗ್ರಾಮದ ಬಳಿ ನಡೆದಿದೆ.
ವೆಲ್ ಯಾತ್ರೆಗೆ ಹೋಗುತ್ತಿದ್ದಾಗ ಖುಷ್ಬೂಗೆ ಅಪಘಾತ... ಆ ಮುರುಗನ್ ಕಾಪಾಡಿದ ಎಂದ ನಟಿ! - ನಟಿ ಖುಷ್ಬು ಸುಂದರ್ ಅಪಘಾತ ಸುದ್ದಿ

10:31 November 18
ಕಾರಿನಲ್ಲಿ ನಟಿ ಖುಷ್ಬೂ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿರುವ ಘಟನೆ ತಮಿಳುನಾಡಿನ ಚೆಂಗಲ್ಪೇಟ್ ಜಿಲ್ಲೆಯಲ್ಲಿ ನಡೆದಿದೆ.
ಮೇಲ್ಮರ್ವತೂರ್ನ ರಾಷ್ಟ್ರೀಯ ಹೆದ್ದಾರಿಯ ಮೂಲಕ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ವೆಲ್ ಯಾತ್ರೆಯಲ್ಲಿ ಭಾಗಿಯಾಗಲು ಕಡಲೂರಿಗೆ ಸಂಚರಿಸುತ್ತಿದ್ದರು. ಈ ವೇಳೆ ನಟಿ ಖುಷ್ಬೂ ಸಂಚರಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ.
ಸಂಭವಿಸಿದ ಅಪಘಾತದಲ್ಲಿ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಆ ಮುರಗನೇ ನನ್ನನ್ನು ಕಾಪಾಡಿದ್ದಾನೆ ಎಂದು ನಟಿ ಖುಷ್ಬೂ ಟ್ವೀಟ್ ಮಾಡಿದ್ದಾರೆ.
ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.