ಲಖನೌ(ಉತ್ತರ ಪ್ರದೇಶ): ಶಾಸಕಾಂಗ ಪಕ್ಷದ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ನಾಳೆ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಎರಡನೇ ಅವಧಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಎರಡನೇ ಅವಧಿಗೆ ಅಧಿಕಾರಕ್ಕೆ ತರಲುವಲ್ಲಿ ಯಶಸ್ವಿಯಾಗಿರುವ ಯೋಗಿ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ.
ಇದನ್ನೂ ಓದಿ:ಮೋದಿ ಉಪಸ್ಥಿತಿಯಲ್ಲಿ ನಾಳೆ ಯೋಗಿ ಪ್ರಮಾಣ: 'ದಿ ಕಾಶ್ಮೀರ್ ಫೈಲ್ಸ್' ಚಿತ್ರತಂಡಕ್ಕೂ ಆಹ್ವಾನ
ಚುನಾವಣೆ ಘೋಷಣೆಯಾಗಿದ್ದ ಸಂದರ್ಭದಲ್ಲೇ ಯೋಗಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಹೇಳಿಕೊಂಡಿತ್ತು. ಆದರೆ, ಇಂದು ನಡೆದ ಅನೌಪಚಾರಿಕ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಈ ಮೂಲಕ ನಾಳೆಯಿಂದ ಉತ್ತರ ಪ್ರದೇಶದಲ್ಲಿ ಮತ್ತೊಂದು ಅವಧಿಗೆ ಯೋಗಿ ಆಡಳಿತ ಶುರುವಾಗಲಿದೆ.
ಲಖನೌನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಏಕತಾ ಕ್ರಿಕೆಟ್ ಮೈದಾನದಲ್ಲಿ ನಾಳೆ ಸಂಜೆ 4 ಗಂಟೆಗೆ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ. ರಾಜ್ಯದ 403 ವಿಧಾನಸಭೆ ಕ್ಷೇತ್ರಗಳ ಪೈಕಿ ಭಾರತೀಯ ಜನತಾ ಪಾರ್ಟಿ 255 ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.