ಕರ್ನಾಟಕ

karnataka

ETV Bharat / bharat

ಅಮಿತ್ ಶಾ ನಿವಾಸದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ!

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲೇ ಅಂತಿಮಗೊಳ್ಳಲಿದೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ

By

Published : Apr 10, 2023, 11:50 AM IST

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ದೆಹಲಿಯಲ್ಲಿ ಸಭೆ ಮೇಲೆ ಸಭೆ ನಡೆಸುತ್ತಿದೆ. ಎರಡು ದಿನಗಳಿಂದ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಚರ್ಚಿಸಲಾಗಿತ್ತು. ಆದರೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಯಲ್ಲಿ ರಾಜ್ಯ ನಾಯಕರ ಜೊತೆ ಸಭೆ ನಡೆದಿದ್ದು, ಪಟ್ಟಿ ಅಂತಿಮಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ರಾಜ್ಯ ಬಿಜೆಪಿ ನಾಯಕರು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ತೀವ್ರ ಕಸರತ್ತು ನಡೆಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಿವಾಸದಲ್ಲಿ ಮೂರು ದಿನಗಳ ಕಾಲ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ರಾಜ್ಯ ಚುನಾವಣಾ ಸಹ ಉಸ್ತುವಾರಿ ಮನ್ಸುಖ್ ಮಾಂಡವಿಯಾ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿ ಎಲ್ ಸಂತೋಷ್ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಿದ್ದರು. ಬಳಿಕ ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಪಟ್ಟಿ ಅಂತಿಮಗೊಳಿಸಲು ಸಭೆ ನಡೆಸಿದ್ದರು. ಆ ಬಳಿಕ ಸಭೆ ಇಂದು ಅಮಿತ್ ಶಾ ಅವರ ಮನೆಗೆ ಶಿಫ್ಟ್ ಆಗಿದ್ದು, ಅಲ್ಲೇ ಪಟ್ಟಿ ಅಂತಿಮವಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ:ಸತತ 8 ಗಂಟೆಗಳ ಕಾಲ ಈಜು.. ಸ್ವಿಮ್ಮಿಂಗ್​ನಲ್ಲಿ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌'ಗೆ ಸೇರಿದ ಬಾಲಕಿ

ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ: ನವದೆಹಲಿಯಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಭಾನುವಾರ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಕುರಿತು ಚರ್ಚಿಸಲಾಗಿದೆ. ಮತ್ತೊಮ್ಮೆ ಸಭೆ ನಡೆಸಿ ಸೋಮವಾರ ಅಥವಾ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಸ್ವಕ್ಷೇತ್ರ ಶಿಗ್ಗಾಂವಿಯಿಂದಲೇ ನಾನು ಸ್ಪರ್ಧಿಸುವುದಾಗಿ ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಅಭಿಪ್ರಾಯ ಸಂಗ್ರಹಿಸಿದ್ದ ಬಿಜೆಪಿ: ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿನ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಮಾರ್ಚ್ 31 ಮತ್ತು ಏಪ್ರಿಲ್ 1 ರಂದು ಜಿಲ್ಲಾ ಕೋರ್ ಕಮಿಟಿಗಳಿಂದ ಬಿಜೆಪಿ ಅಭಿಪ್ರಾಯ ಸಂಗ್ರಹಿಸಿತ್ತು. ಬಳಿಕ ಏಪ್ರಿಲ್ 4 ಮತ್ತು 5 ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ, ಹೈಕಮಾಂಡ್​ಗೆ ಕಳುಹಿಸಲಾಗಿತ್ತು.

ಕಾಂಗ್ರೆಸ್ ಈಗಾಗಲೇ ಒಟ್ಟು 224 ಸ್ಥಾನಗಳ ಪೈಕಿ 166 ಸ್ಥಾನಗಳಿಗೆ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದೆ. ಜೆಡಿಎಸ್ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡಿದೆ. ಆದರೆ ಬಿಜೆಪಿ ಮಾತ್ರ ತಡವಾಗಿ ಪಟ್ಟಿ ಬಿಡುಗಡೆ ಮಾಡುತ್ತಿದೆ. ಮೇ 10ರಂದು ರಾಜ್ಯ ವಿಧಾನಸಬಾ ಚುನಾವಣೆ ನಿಗದಿಯಾಗಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.

ಇದನ್ನು ಓದಿ:ಮಹೇಶ ಕುಮಠಳ್ಳಿಗೆ ನೂರಕ್ಕೆ ನೂರರಷ್ಟು ಟಿಕೆಟ್​ ಸಿಗುವ ಬಗ್ಗೆ ವಿಶ್ವಾಸವಿದೆ: ರಮೇಶ ಜಾರಕಿಹೊಳಿ

ABOUT THE AUTHOR

...view details