ಮುಜಾಫರ್‌ಪುರ (ಬಿಹಾರ) : ಬಿಹಾರದ ಸಚಿವ ರಾಮ್ ಸೂರತ್ ರಾಯ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಂಡಾಡಿದ್ದಾರೆ. ಅವರ ನಾಯಕತ್ವದಲ್ಲಿ ಭಾರತವು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನವನ್ನು ನಡೆಸಿತು ಮತ್ತು ಭಾರತೀಯರ ಜೀವಗಳನ್ನು ಉಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.
ನೀವು ಜೀವಂತವಾಗಿದ್ದರೆ, ಅದರ ಕ್ರೆಡಿಟ್ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಅವರು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಲಸಿಕೆಯನ್ನು ಅಭಿವೃದ್ಧಿಪಡಿಸಲು ಉತ್ತೇಜಿಸಿದರು ಮತ್ತು ದೇಶದ ಜನರಿಗೆ ಉಚಿತ ಸರಬರಾಜು ಮಾಡಿದರು ಎಂದು ಮುಜಾಫರ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಹೇಳಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಕಾರಣವಾಗಿದೆ. ಪ್ರತಿಪಕ್ಷದ ಮುಖಂಡರು ಇವರ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಸಾಂಕ್ರಾಮಿಕ ರೋಗದ ಆರ್ಥಿಕ ಪ್ರಭಾವದ ವಿರುದ್ಧ ಹಲವಾರು ದೇಶಗಳು ಇನ್ನೂ ಹೋರಾಡುತ್ತಿವೆ. ಆದರೆ ಭಾರತದಲ್ಲಿ, ಆರ್ಥಿಕತೆಯನ್ನು ಬಲಪಡಿಸುವ ಕೆಲಸವನ್ನು ತ್ವರಿತ ಗತಿಯಲ್ಲಿ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.