ಭೋಪಾಲ್:ಒಂದಿಲ್ಲೊಂದು ವಿವಾದಿತ ಹೇಳಿಕೆಗಳ ಮೂಲಕ ಗಮನಸೆಳೆಯುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಕಳೆದ ಕೆಲವು ದಿನಗಳ ಹಿಂದೆ ಬಾಸ್ಕೆಟ್ ಬಾಲ್ ಆಡಿದ್ದರು. ಇದೀಗ ಮದುವೆ ಕಾರ್ಯಕ್ರಮವೊಂದರಲ್ಲಿ ಅವರು ಡ್ಯಾನ್ಸ್ ಮಾಡಿದ್ದು, ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ಞಾ ಸಿಂಗ್ ಠಾಕೂರ್ ಕಳೆದ ಕೆಲ ದಿನಗಳ ಹಿಂದೆ ತಮಗೆ ಅನಾರೋಗ್ಯವಿದೆ ಎಂದು ಕೋರ್ಟ್ನಲ್ಲಿ ಹೇಳಿಕೊಂಡಿದ್ದರು. ಜತೆಗೆ ವ್ಹೀಲ್ ಚೇರ್ ಮೇಲೆ ಕುಳಿತುಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.