ಪಿಲಿಭಿತ್ (ಉತ್ತರಪ್ರದೇಶ) :ಸಂಸದ ವರುಣ್ ಗಾಂಧಿ ಮತ್ತೊಮ್ಮೆ ತಮ್ಮದೇ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. ಸಣ್ಣ ವ್ಯಾಪಾರಿಗಳ ಪರ ಧ್ವನಿ ಎತ್ತಿದ್ದಾರೆ. ಕೇಂದ್ರ ಸರ್ಕಾರದ ಆರ್ಥಿಕ ನಿರ್ವಹಣೆ, ಎಲ್ಲ ಅವ್ಯವಸ್ಥೆಗಳಿಂದಾಗಿ ಸಣ್ಣ ವ್ಯಾಪಾರಸ್ಥರು, ಉತ್ಪಾದಕರು ತಮ್ಮ ಉದ್ಯಮ ಕೈ ಬಿಡುವ ಪರಿಸ್ಥಿತಿಗೆ ಸಿಲುಕಿದ್ದಾರೆ ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಭ್ರಷ್ಟಾಚಾರ, ಹಣದುಬ್ಬರ ಮತ್ತು ಆರ್ಥಿಕ ನೀತಿ ಅಸ್ವಸ್ಥತೆಯಿಂದಾಗಿ ಹೆಚ್ಚಿನ ಸಂಖ್ಯೆಯ ಸಣ್ಣ ಉತ್ಪಾದಕರು ಮತ್ತು ವ್ಯಾಪಾರಸ್ಥರು ತಮ್ಮ ವ್ಯಾಪಾರವನ್ನು ನಿಲ್ಲಿಸುವ ಅನಿವಾರ್ಯತೆಗೆ ತಲುಪಿದ್ದಾರೆ.