ಹೈದರಾಬಾದ್:ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಇಂದಿನಿಂದ ಆರಂಭವಾಗಲಿದೆ. ಪಕ್ಷದ ಎನ್‌ಇಸಿ ಸಭೆಯ ಎಲ್ಲ ಅಧಿವೇಶನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಉನ್ನತ ನಾಯಕರೊಬ್ಬರು ತಿಳಿಸಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮಾತನಾಡಿ, 18 ವರ್ಷಗಳ ನಂತರ ಎನ್‌ಇಸಿ ಸಭೆ ನಡೆಸಲಾಗುತ್ತಿದೆ. ಎನ್‌ಇಸಿ(ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ) ಸಭೆಗೂ ಮುನ್ನಾ ದಿನವಾದ ನಿನ್ನೆ ಸಂಜೆ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಿತು.
ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಅವರು ಪ್ರಧಾನ ಕಾರ್ಯದರ್ಶಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನಿ ಮೋದಿ ಅವರು ಎಲ್ಲಾ ಅಧಿವೇಶನಗಳಲ್ಲಿ ಭಾಗವಹಿಸುತ್ತಾರೆ ಮತ್ತು ಕಾರ್ಯಕರ್ತರೊಂದಿಗೆ ಇರುತ್ತಾರೆ ಚುಗ್ ಇದೇ ವೇಳೆ ಮಾಹಿತಿ ನೀಡಿದ್ದಾರೆ. ಎನ್‌ಇಸಿ ಮುಕ್ತಾಯದ ನಂತರ ಮೋದಿ ಜುಲೈ 3 ರಂದು ಹೈದರಾಬಾದ್‌ನ ಪರೇಡ್ ಮೈದಾನದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಇದೇ ವೇಳೆ ತಿಳಿಸಿದೆ.