ನವದೆಹಲಿ: ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಯಿತು. ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರದ ಬಗ್ಗೆ ಹೆಚ್ಚು ಚರ್ಚೆ ನಡೆಯಿತು ಎಂದು ತಿಳಿದು ಬಂದಿದೆ.
ಈ ವರ್ಷದ ಆರಂಭದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ ವಿಶೇಷವಾಗಿ ಚರ್ಚೆ ನಡೆಯಿತು ಎಂದು ರಾಜ್ಯದ ಸಂಸದರೂ ಆಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಕಾರ್ಯಕಾರಿಣಿ ಬಗ್ಗೆ ಮಾತನಾಡಿದ ಅವರು, , ತ್ರಿಪುರಾ, ನಾಗಾಲ್ಯಾಂಡ್, ಮೇಘಾಲಯ ಮತ್ತು ಕರ್ನಾಟಕದಲ್ಲಿ ಪಕ್ಷದ ಚಟುವಟಿಕೆಗಳ ಕುರಿತು ಇಂದಿನ ಸಭೆಯಲ್ಲಿ ಸಂಕ್ಷಿಪ್ತವಾಗಿ ನಡೆಯಿತು ಎಂದು ಹೇಳಿದ್ದಾರೆ.
2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ. ಕರ್ನಾಟಕ ಸಿಎಂ ಮತ್ತು ತ್ರಿಪುರಾ ಸಿಎಂ ಕೂಡ ರಾಜ್ಯಗಳ ಪಕ್ಷದ ಅಧ್ಯಕ್ಷರೊಂದಿಗೆ ಸಭೆಯಲ್ಲಿ ಭಾಗವಹಿಸಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ ಇಂದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ, ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯದ ಬಿಜೆಪಿ ರಾಜ್ಯ ಚುನಾವಣೆಯ ಹೊಣೆ ಹೊತ್ತವರು ಮುಂದಿನ ಕಾರ್ಯತಂತ್ರ, ಪಕ್ಷದ ನಿಲುವು, ಗೆಲ್ಲಲು ಮಾಡಬೇಕಾಗಿರುವ ರಣತಂತ್ರಗಳು ಹಾಗೂ ಈಗಿರುವ ಪರಿಸ್ಥಿತಿ ಬಗ್ಗೆ ತಮ್ಮ ವರದಿಗಳನ್ನು ಮಂಡಿಸಿದರು ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ. ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರು ನಾಳೆ ತಮ್ಮ ತಮ್ಮ ರಾಜ್ಯ ವರದಿಗಳನ್ನು ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ. ಪ್ರತಿಪಕ್ಷಗಳ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ:ಇನ್ನು ಅಧಿವೇಶನದ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಪಕ್ಷಗಳಿಗೆ ಮಾತನಾಡಲು ಯಾವುದೇ ವಿಷಯವಿಲ್ಲ. ಅದಕ್ಕಾಗಿ ಉಪಯೋಗ ಇಲ್ಲದ ವಿಷಯಗಳ ಮೇಲೆ ಕೇಂದ್ರದ ವಿರುದ್ಧ ವಿನಾಕಾರಣ ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿದರು. "ಪೆಗಾಸಸ್, ರಫೇಲ್, ಇಡಿ, ಸೆಂಟ್ರಲ್ ವಿಸ್ಟಾ, ಮೀಸಲಾತಿ ಮತ್ತು ನೋಟು ಅಮಾನ್ಯೀಕರಣದ ಮೇಲೆ ಕಾಂಗ್ರೆಸ್ ಆಧಾರ ರಹಿತ ಆರೋಪ ಮಾಡುತ್ತಿದೆ ಎಂದು ದೂರಿದರು. ಈ ವಿಷಯಗಳಲ್ಲಿ ನ್ಯಾಯಾಲಯದಿಂದಲೂ ಕೋರ್ಟ್ಗೆ ಹೋದವರು ಛೀಮಾರಿ ಹಾಕಿಸಿಕೊಂಡರು ಎಂದು ಸೀತಾರಾಮನ್ ಹೇಳಿದರು.
2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ. ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಪಕ್ಷದ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು, ಮುಂಬರುವ ಎಲೆಕ್ಷನ್ಗಳ ಮೇಲೆ ಕೇಂದ್ರೀಕರಿಸಿದ್ದಾರೆ. ಹಾಗೂ 2014 ರಿಂದ ಮೋದಿ ಸರ್ಕಾರ ಮಾಡಿರುವ ಸಾಧನೆಗಳನ್ನು ದೇಶದ ಜನರ ಎದುರು ಇಡಲು ಸನ್ನದ್ಧರಾಗಿದ್ದಾರೆ. ಅದನ್ನೇ ಎಲ್ಲರಿಗೂ ಹೇಳುತ್ತಿದ್ದಾರೆ ಎಂದರು. ಇದೇ ವೇಳೆ ಭಾರತವು ಕಾರುಗಳು ಮತ್ತು ಸೆಲ್‌ಫೋನ್‌ಗಳ ಉತ್ಪಾದನೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಮುಂದಿದೆ ಎಂದು ಸರ್ಕಾರದ ಸಾಧನೆಗಳನ್ನು ಹೇಳಿದರು.
12 ಸಿಎಂಗಳು ಕಾರ್ಯಕಾರಿಣಿಯಲ್ಲಿ ಭಾಗಿ:2024ರ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಈ ವರ್ಷ ಒಂಬತ್ತು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಎರಡು ದಿನಗಳ ಬೃಹತ್ ಕಾರ್ಯತಂತ್ರದ ಅಧಿವೇಶನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕಾರ್ಯಕಾರಿಣಿ ಆರಂಭವಾಗುವ ಮುನ್ನ ನವದೆಹಲಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿಯವರಲ್ಲದೇ 35 ಕೇಂದ್ರ ಸಚಿವರು, 12 ಮುಖ್ಯಮಂತ್ರಿಗಳು ಮತ್ತು 37 ಪ್ರಾದೇಶಿಕ ಮುಖ್ಯಸ್ಥರು ಭಾಗವಹಿಸಿದ್ದಾರೆ. ಸಮಾರಂಭದಲ್ಲಿ ಸುಮಾರು 350 ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ಇದನ್ನು ಓದಿ:ದೆಹಲಿಯಲ್ಲಿ ಮೋದಿ ರೋಡ್ ಶೋ.. ಎರಡು ದಿನದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಭರ್ಜರಿ ಎಂಟ್ರಿ