ಕೊಲ್ಕತ್ತಾ: "ನಾನು ಕಳೆದ 17 ವರ್ಷಗಳಿಂದ ಬಿಜೆಪಿಯೊಂದಿಗೆ ಇದ್ದೆ. ಆದರೆ ಬಿಜೆಪಿ ಅವರ ಯಾವುದೇ ಭರವಸೆಗಳನ್ನು ಉಳಿಸಿಕೊಂಡಿಲ್ಲ. ಅದಕ್ಕಾಗಿಯೇ ನಾನು ಬಿಜೆಪಿಯ ಮೈತ್ರಿಯನ್ನು ತ್ಯಜಿಸಿದ್ದೇನೆ" ಎಂದು ಗೂರ್ಖಾ ಜನಮುಕ್ತಿ ಮೋರ್ಚಾ ಮುಖ್ಯಸ್ಥ ಬಿಮಲ್ ಗುರುಂಗ್ ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ ಬಿಮಲ್ ಗುರುಂಗ್
ಬಿಜೆಪಿ ಯಾವುದೇ ಭರವಸೆಗಳನ್ನು ಉಳಿಸಿಕೊಂಡಿಲ್ಲ ಹಾಗಾಗಿ ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ಗೆ ಬೆಂಬಲ ಸೂಚಿಸುವುದಾಗಿ ಗೂರ್ಖಾ ಜನಮುಕ್ತಿ ಮೋರ್ಚಾ ಮುಖ್ಯಸ್ಥ ಬಿಮಲ್ ಗುರುಂಗ್ ಹೇಳಿದ್ದಾರೆ.
ಅಲ್ಲದೇ ಡಾರ್ಜಿಲಿಂಗ್ ಪುರಸಭೆಯ 17 ಕೌನ್ಸಿಲರ್‌ಗಳು ಬಿಜೆಪಿಯಿಂದ ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡಿರುವುದಾಗಿ ತಿಳಿಸಿದರು. ಅಲ್ಲದೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ತೃಣಮೂಲ ಕಾಂಗ್ರೆಸ್ ಅನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
"ನಾನು 17 ವರ್ಷಗಳಿಂದ ಬಿಜೆಪಿಯೊಂದಿಗೆ ಇದ್ದೆ. ಆದರೆ ಅವರು ತಮ್ಮ ಭರವಸೆಗಳನ್ನು ಉಳಿಸಿಕೊಳ್ಳಲಿಲ್ಲ ಮತ್ತು ಪದೇ ಪದೇ ನಮ್ಮನ್ನು ಮತದಾನ ಯಂತ್ರವಾಗಿ ಬಳಸುತ್ತಿದ್ದರು. ಇನ್ನು ಮುಂದೆ ಈ ರೀತಿ ಮುಂದುವರೆಯುವುದಿಲ್ಲ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭರವಸೆ ನೀಡಿದ್ದನ್ನು ಈಡೇರಿಸುತ್ತಾರೆ. ಅದಕ್ಕಾಗಿಯೇ ನಾವು 2021ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಅನ್ನು ಬೆಂಬಲಿಸುತ್ತೇವೆ" ಎಂದು ಹೇಳಿದ್ದಾರೆ.