ನವದೆಹಲಿ:ಬಿಹಾರದ ಮಾಜಿ ಉಪಮುಖ್ಯಮಂತ್ರಿಯಾಗಿದ್ದ ಸುಶೀಲ್ ಕುಮಾರ್ ಮೋದಿ ಅವರಿಗೆ ಮೇಲ್ಮನೆ ಚುನಾವಣೆಗೆ ನಾಮನಿರ್ದೇಶನಗೊಳಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಆದೇಶ ಹೊರಡಿಸಿದೆ.
ಲೋಕ ಜನಶಕ್ತಿ ಪಕ್ಷದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದಿಂದ ತೆರುವಾದ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು ಸುಶೀಲ್ ಕುಮಾರ್ ಮೋದಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ.