ಕರ್ನಾಟಕ

karnataka

ETV Bharat / bharat

ಮಣಿಪುರ ಚುನಾವಣಾ ಫಲಿತಾಂಶ : ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಬಿಜೆಪಿ - ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಮಣಿಪುರ ವಿಧಾನಸಭಾ ಚುನಾವಣೆಯ ಬಹು ನಿರೀಕ್ಷಿತ ಫಲಿತಾಂಶ ಇಂದು ಹೊರ ಬೀಳಲಿದ್ದು, ಮತ ಎಣಿಕೆ ಕಾರ್ಯ ಬಿರುಸುಗೊಂಡಿದೆ. ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಆಡಳಿತಾರೂಢ ಬಿಜೆಪಿ ಇದೀಗ 26 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಮಣಿಪುರದಲ್ಲಿ ಬಿರುಸುಗೊಂಡ ಮತ ಎಣಿಕೆ ಕಾರ್ಯ
BJP

By

Published : Mar 10, 2022, 11:09 AM IST

ಮಣಿಪುರ: ಕೆಲವೇ ಗಂಟೆಗಳಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳಲಿದ್ದು ಮಣಿಪುರದಲ್ಲಿ ಭಾರತೀಯ ಜನತಾ ಪಾರ್ಟಿ ಮುನ್ನಡೆ ಕಾಯ್ದುಕೊಂಡಿದೆ.

ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಆಡಳಿತಾರೂಢ ಬಿಜೆಪಿ ಇದೀಗ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ - 11 , ಎನ್​ಪಿಪಿ - 11 ಮಂದಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಅಚ್ಚರಿ ಅಂದ್ರೆ, ಜೆಡಿಯು ಭಾರೀ ಹಿನ್ನಡೆ ಕಾಯ್ದುಕೊಂಡು ಮುಖಭಂಗ ಅನಭವಿಸುತ್ತಿದೆ.

ಮಣಿಪುರದಲ್ಲಿ ಬಿರುಸುಗೊಂಡ ಮತ ಎಣಿಕೆ ಕಾರ್ಯ

60 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಣಿಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಬಿಸುರುಗೊಂಡಿದ್ದು, ಪೊಲೀಸ್​ ಬಿಗಿ ಭದ್ರತೆ ಮತ್ತು ಕೋವಿಡ್-19 ಮಾರ್ಗಸೂಚಿಗನುಗುಣವಾಗಿ ಮತ ಎಣಿಕೆ ನಡೆಸಲಾಗುತ್ತಿದೆ.

ABOUT THE AUTHOR

...view details