ಗೋರಖ್ಪುರ:ಉತ್ತರ ಪ್ರದೇಶದ ಗೋರಖ್ಪುರದ ಗುಲರಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾರಾಯಣಪುರದ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿಯ ಸೆಕ್ಟರ್ ಉಸ್ತುವಾರಿ 52 ವರ್ಷದ ಬ್ರಿಜೇಶ್ ಸಿಂಗ್ ಅವರನ್ನು ದುಷ್ಕರ್ಮಿಗಳು ಶುಕ್ರವಾರ ರಾತ್ರಿ ಹತ್ಯೆ ಮಾಡಿದ್ದಾರೆ. ಈ ಬಾರಿ ನಡೆದ ಪಂಚಾಯತ್ ಚುನಾವಣೆಯಲ್ಲಿ ಬ್ರಿಜೇಶ್ ಸಿಂಗ್ ಪ್ರಧಾನ ಅಭ್ಯರ್ಥಿಯಾಗಿದ್ದರು.
ಇಂದು (ಶನಿವಾರ) ಅಭ್ಯರ್ಥಿಗಳ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದರು. ಚುನಾವಣಾ ಪೈಪೋಟಿ ಹಿನ್ನೆಲೆ ಬಿಜೆಪಿ ಮುಖಂಡ ಬ್ರಿಜೇಶ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಅನೇಕರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.