ಚಂಡೀಗಢ : ಕೇಂದ್ರದ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅಧ್ಯಕ್ಷತೆಯಲ್ಲಿ ಕರೆದ ಸರ್ವಪಕ್ಷ ಸಭೆಗೆ ಬಿಜೆಪಿ ಗೈರಾಗಿದೆ.
ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬೆಳವಣಿಗೆಗೆ ಸಂಬಂಧಪಟ್ಟಂತೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯಲಾಗಿತ್ತು.
ಓದಿ : ರೈತರೊಂದಿಗೆ ಯುದ್ಧ ಮಾಡ್ತಿದ್ದೀರಾ?: ಪ್ರಧಾನಿ ಮೋದಿಗೆ ಪ್ರಶ್ನೆ ಮಾಡಿದ ಪ್ರಿಯಾಂಕಾ!
ಕೃಷಿ ಕಾನೂನುಗಳಾದ -ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ-2020, ರೈತ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದದ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ- 2020, ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ -2020 ರ ವಿರುದ್ಧ 26 ನವೆಂಬರ್ 2020 ರಿಂದ ರಾಷ್ಟ್ರ ರಾಜಧಾನಿ ದೆಹಲಿಯ ವಿವಿಧ ಗಡಿಗಳಲ್ಲಿ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.