ನವದೆಹಲಿ: ವಿವಾಹಿತ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ಇವರ ಸಹೋದ್ಯೋಗಿ ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಬಿಜೆಪಿ ಅಮಾನತುಗೊಳಿಸಿದೆ. ಈ ಇಬ್ಬರನ್ನೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ.
ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೂಪುರ್ ಶರ್ಮಾ ನೀಡಿದ್ದರು. ಇದರಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಕೋಮು ಘರ್ಷಣೆ ನಡೆದಿತ್ತು. ಅಲ್ಲದೇ, ಈ ವಿವಾದವು ಹಿಂಸಾಚಾರಕ್ಕೆ ತಿರುಗಿ ಅನೇಕರು ಗಾಯಗೊಂಡಿದ್ದರು.