ಚೆನ್ನೈ:ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಒಂದೇ ಹಂತದಲ್ಲಿ ಏಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಘೋಷಣೆಯಾಗಲಿದೆ.
ತಮಿಳುನಾಡಿನಲ್ಲಿ ಈಗಾಗಲೇ ಎಐಎಡಿಎಂಕೆ-ಭಾರತೀಯ ಜನತಾ ಪಾರ್ಟಿ ಮೈತ್ರಿ ಘೋಷಣೆಯಾಗಿದ್ದು, ಇದರ ಬೆನ್ನಲ್ಲೇ ಇದೀಗ ಎರಡು ಪಕ್ಷಗಳ ನಡುವೆ ಕ್ಷೇತ್ರಗಳ ಹೊಂದಾಣಿಕೆಯಾಗಿದೆ. 20 ಕ್ಷೇತ್ರಗಳನ್ನು ಭಾರತೀಯ ಜನತಾ ಪಾರ್ಟಿಗೆ ಬಿಟ್ಟುಕೊಡಲು ಎಐಎಡಿಎಂಕೆ ಒಪ್ಪಿಕೊಂಡಿದ್ದು, ಇದರ ಜತೆಗೆ ಕನ್ಯಾಕುಮಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದೆ.