ಕರ್ನಾಟಕ

karnataka

ETV Bharat / bharat

ತಿರುಪತಿ ಲೋಕಸಭಾ ಉಪಚುನಾವಣೆ: ಜನಸೇನಾ ಬೆಂಬಲದೊಂದಿಗೆ ಕಣಕ್ಕಿಳಿಯಲಿರುವ ಬಿಜೆಪಿ - BJP to contest Tirupati LS bypoll with Janasena support

ತಿರುಪತಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಅಭ್ಯರ್ಥಿಗೆ ಟಿಕೆಟ್​ ನೀಡಲಾಗುವುದು ಎಂದು ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ತಿಳಿಸಿದ್ದಾರೆ.

BJP to contest Tirupati LS bypoll with Janasena support
ತಿರುಪತಿ ಲೋಕಸಭಾ ಉಪ ಚುನಾವಣೆ

By

Published : Mar 13, 2021, 3:18 PM IST

ತಿರುಪತಿ (ಆಂಧ್ರಪ್ರದೇಶ): ಮುಂಬರಲಿರುವ ಲೋಕಸಭಾ ಉಪಚುನಾವಣೆಯಲ್ಲಿ ಜಸಸೇನಾ ಪಕ್ಷದ ಬೆಂಬಲದೊಂದಿಗೆ ಆಂಧ್ರದ ತಿರುಪತಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದೆ.

ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಮತ್ತು ಆಂಧ್ರ ಬಿಜೆಪಿ ರಾಜ್ಯಾಧ್ಯಕ್ಷ ಸೋಮು ವೀರರಾಜು ನಡೆಸಿದ ಜಂಟಿ ಸಭೆಯಲ್ಲಿ ತಿರುಪತಿ ಲೋಕಸಭಾ ಉಪಚುನಾವಣೆಯ ಮೈತ್ರಿ ಅಭ್ಯರ್ಥಿಯು ಬಿಜೆಪಿ ಪಕ್ಷದವರಾಗಿರಲಿದ್ದಾರೆ. ಸರ್ವಾನುಮತದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸುನಿಲ್ ದಿಯೋಧರ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮಾಜಿ ನಾಯಕ ಯಶ್ವಂತ್ ಸಿನ್ಹಾ ಟಿಎಂಸಿ ಸೇರ್ಪಡೆ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪವನ್ ಕಲ್ಯಾಣ್, ಬಿಜೆಪಿ ಹಿರಿಯ ನಾಯಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರೊಂದಿಗೆ ಹಲವಾರು ಸುತ್ತಿನ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಿರುಪತಿ ಲೋಕಸಭಾ ಉಪಚುನಾವಣೆಯಲ್ಲಿ ಪ್ರಬಲ ಮತ್ತು ಅರ್ಹ ಬಿಜೆಪಿ ಅಭ್ಯರ್ಥಿಗೆ ಟಿಕೆಟ್​ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಪಕ್ಷವಾದ ತೆಲುಗು ದೇಶಂ ಪಕ್ಷ (ಟಿಡಿಪಿ)ವು ಈಗಾಗಲೇ ಚುನಾವಣೆಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಆಡಳಿತ ಪಕ್ಷ ವೈಎಸ್​ಆರ್​ಪಿ ಇನ್ನೂ ಅಭ್ಯರ್ಥಿ ಆಯ್ಕೆ ಮಾಡಿಲ್ಲ.

ABOUT THE AUTHOR

...view details