ಗಾಂಧಿನಗರ (ಗುಜರಾತ್):ಗುಜರಾತ್ನಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ ನೂರು ಹೊಸ ಮುಖಗಳನ್ನು ಕಣಕ್ಕಿಳಿಸಲಿದೆ ಎಂದು ಗುಜರಾತ್ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಮಂಗಳವಾರ ಹಿಮ್ಮತ್ ನಗರದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.
ಮುಂದಿನ ವರ್ಷದ ಅಂತ್ಯದ ವೇಳೆಗೆ ಗುಜರಾತ್ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ. ಪೇಜ್ ಪ್ರೆಸಿಡೆಂಟ್ (Panna Pramukh) ಕಾರ್ಡ್ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, "2022 ರಲ್ಲಿ ಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಳೆಯ ಮುಖಗಳನ್ನು ಬದಲಿಸಿ, ನೂರು ಹೊಸ ಮುಖಗಳನ್ನು ಕಣಕ್ಕಿಳಿಸುವ ಯೋಜನೆ ಇದೆ.
ಟಿಕೆಟ್ಗಳಿಗಾಗಿ ಯಾರೂ ನನ್ನನ್ನು ಸಂಪರ್ಕಿಸಬಾರದು ಎಂದು ನಾನು ಹೇಳುತ್ತೇನೆ. ಏಕೆಂದರೆ ಈ ನಿರ್ಧಾರವನ್ನು ಉನ್ನತ ಮಟ್ಟದಿಂದ ತೆಗೆದುಕೊಳ್ಳಲಾಗಿದೆ ಮತ್ತು ಯಾರಾದರೂ ಅತೃಪ್ತರಾಗಿದ್ದರೆ, ಅವರು ದೆಹಲಿಗೆ ಹೋಗಬಹುದು" ಎಂದು ಇದೇ ವೇಳೆ ಅವರು ಹೇಳಿದ್ದಾರೆ.