ಕಥುವಾ (ಜಮ್ಮು ಮತ್ತು ಕಾಶ್ಮೀರ):ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 370ನೇ ವಿಧಿ ರದ್ದು ಪಡಿಸಿದಂತೆಯೇ ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಮುಕ್ತಗೊಳಿಸುವ ಭರವಸೆ ಈಡೇರಿಸುತ್ತದೆ ಎಂದು ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದರು.
ನಮ್ಮ ಸರ್ಕಾರ ಯಾವುದೇ ಭರವಸೆ ನೀಡಿದರು ಅದನ್ನು ಈಡೇರಿಸುವ ಪ್ರಯತ್ನ ಮಾಡುತ್ತದೆ. ನಾವು 370ನೇ ವಿಧಿಯನ್ನು ರದ್ದತಿಯ ಬಗ್ಗೆ ಮಾತನಾಡಿದಾಗ ಜನರು ನಮ್ಮನ್ನು ಗೇಲಿ ಮಾಡುತ್ತಿದ್ದರು. ಆದರೆ, ನಾವು ನಮ್ಮ ಭರವಸೆಯನ್ನು ಈಡೇರಿಸಿದ್ದೇವೆ. ಅದೇ ರೀತಿ ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಭಾಗವನ್ನು ನಾವು ಮುಕ್ತಗೊಳಿಸುತ್ತೇವೆ ಎಂಬ ಭರವಸೆ ನೀಡಿದರು. ಕಥುವಾದಲ್ಲಿ ಮಹಾರಾಜ ಗುಲಾಬ್ ಸಿಂಗ್ರ 20 ಅಡಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.