ಕರ್ನಾಟಕ

karnataka

ETV Bharat / bharat

ಮಣಿಪುರದಲ್ಲಿ 2ನೇ ಹಂತದ ಮತದಾನದ ವೇಳೆ ಹಿಂಸಾಚಾರ: ಬಿಜೆಪಿ ಕಾರ್ಯಕರ್ತ ಸೇರಿ ಇಬ್ಬರು ಸಾವು - ವಿಧಾನಸಭೆ ಚುನಾವಣೆ 2022

Manipur assembly election-2022: ಮಣಿಪುರದಲ್ಲಿ ನಡೆಯುತ್ತಿರುವ 2ನೇ ಹಂತದ ಮತದಾನದ ವೇಳೆ ಹಿಂಸಾಚಾರ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತನೋರ್ವ ನಡೆಸಿರುವ ಗುಂಡಿನ ದಾಳಿಯಲ್ಲಿ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿದ್ದಾನೆ.

BJP worker shot dead in Manipur
BJP worker shot dead in Manipur

By

Published : Mar 5, 2022, 5:27 PM IST

ಇಂಫಾಲ್​(ಮಣಿಪುರ):ಮಣಿಪುರದ 22 ಕ್ಷೇತ್ರಗಳಿಗೆ ಇಂದು ಎರಡನೇ ಹಂತದ ಮತದಾನವಾಗಿದ್ದು, ಈ ವೇಳೆ ಹಿಂಸಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಪರಿಣಾಮ ಓರ್ವ ಬಿಜೆಪಿ ಕಾರ್ಯಕರ್ತ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮಣಿಪುರದ ಸೇನಾಪತಿ ಜಿಲ್ಲೆಯ ಕರೋಂಗ್ ಕ್ಷೇತ್ರದ 47/49 ಸಂಖ್ಯೆಯ ಮತಗಟ್ಟೆ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡಿನ ದಾಳಿ ನಡೆಸಿ ಬಿಜೆಪಿ ಕಾರ್ಯಕರ್ತನನ್ನ ಕೊಲೆ ಮಾಡಿದ್ದಾನೆ. ಮೃತನನ್ನ 25 ವರ್ಷದ ಎಲ್ ಅಮುಬಾ ಸಿಂಗ್​ ಎಂದು ಗುರುತಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತನನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮತದಾನ ನಡೆಯುತ್ತಿದ್ದ ವೇಳೆ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದ ಕಾರಣ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮತ್ತೊಂದು ಘಟನೆ ತೌಲಬ್​ನಲ್ಲಿ ನಡೆದಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿರಿ:ಮಣಿಪುರದ ಉಚ್ಛಾಟಿತ ಬಿಜೆಪಿ ನಾಯಕನ ನಿವಾಸದೆದುರು ಸ್ಫೋಟ.. ಮುಂದುವರಿದ 2ನೇ ಹಂತದ ಮತದಾನ

ಉಚ್ಛಾಟಿತ ಬಿಜೆಪಿ ನಾಯಕನ ನಿವಾಸದೆದುರು ಬಾಂಬ್​ ಸ್ಫೋಟ:ಮಣಿಪುರದ ಇಂಪಾಲ್​​​ನ ಬಿಜೆಪಿ ಉಚ್ಛಾಟಿತ ನಾಯಕ ಚೋಂಗ್ಥಮ್​ ಬಿಜೋಯ್​ ಅವರ ನಿವಾಸದ ಎದುರು ನಿನ್ನೆ ರಾತ್ರಿ ದುಷ್ಕರ್ಮಿಗಳು ಕಚ್ಚಾ ಬಾಂಬ್​ ಎಸೆದಿದ್ದಾರೆ. ಆದರೆ, ಯಾವುದೇ ರೀತಿಯ ಸಾವು-ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

ಮಣಿಪುರದಲ್ಲಿಂದು ಬೆಳಗ್ಗೆ 7 ಗಂಟೆಯಿಂದ 10 ಜಿಲ್ಲೆಗಳ 22 ಕ್ಷೇತ್ರಗಳಲ್ಲಿ ಮತದಾನವಾಗ್ತಿದ್ದು, 92 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಲ್ಲಿಯವರೆಗಿನ ಮಾಹಿತಿ ಪ್ರಕಾರ ಶೇ. 68ರಷ್ಟು ಮತದಾನವಾಗಿದೆ ಎಂದು ವರದಿಯಾಗಿದೆ.

ABOUT THE AUTHOR

...view details