ಕೋಲ್ಕತ್ತಾ: ವಿಧಾನಸಭಾ ಚುನಾವಣೆ ಸಂಬಂಧ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಮಾರ್ಚ್ 21ಕ್ಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸದ್ಯದಲ್ಲೇ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ಶಿಕ್ಷಣ, ಆರೋಗ್ಯ, ಆಹಾರ, ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆ ಕುರಿತು ಹೆಚ್ಚಿನ ಗಮನ ಹರಿಸಲು ಬಿಜೆಪಿ ಬಯಸಿದ್ದು, ಎಲ್ಲಾ ರೀತಿಯ ಜನರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ರಿಲೀಸ್ ಮಾಡಲಿದೆ.