ನವದೆಹಲಿ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆ ನಡುವೆ, ಕೋವಿಡ್ -19ರ ಪ್ರೋಟೋಕಾಲ್‌ಗಳ ಉಲ್ಲಂಘನೆಯಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಬಿಜೆವೈಎಂ ಮುಖಂಡರೊಬ್ಬರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.
ಮಹಾರಾಷ್ಟ್ರ ಸಿಎಂ ಠಾಕ್ರೆ ಅವರಿಗೆ ಕೋವಿಡ್ -19 ದೃಢಪಟ್ಟಿದ್ದರೂ, ಉದ್ದವ್ ತಮ್ಮ ಬೆಂಬಲಿಗರನ್ನು ಭೇಟಿ ಮಾಡುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಕಾರ್ಯದರ್ಶಿ ತಜೀಂದರ್ ಪಾಲ್ ಸಿಂಗ್ ಬಗ್ಗಾ ಆರೋಪಿಸಿದ್ದಾರೆ.
ಈ ನಡುವೆ ಮುಂಬೈನ ಮಲಬಾರ್ ಹಿಲ್ ಪೊಲೀಸ್ ಠಾಣೆಗೆ ಬಗ್ಗಾ ಭೇಟಿ ನೀಡಿ ದೂರು ನೀಡಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಉದ್ಧವ್ ಠಾಕ್ರೆ ಅವರಿಗೆ ಕೋವಿಡ್ ಇರುವುದಾಗಿ ಸ್ವತಃ ಅವರೇ ಫೇಸ್ಬುಕ್ ಲೈವ್ನಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲ ವಿವಿಧ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ. ಅಷ್ಟೇ ಏಕೆ ಸಿಎಂ ಉದ್ದವ್ ಠಾಕ್ರೆ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ಖಚಿತ ಪಡಿಸಿದ್ದಾರೆ.
ಹೀಗಾಗಿ ಕೋವಿಡ್ ನಿಯಮ ಉಲ್ಲಂಘಿಸಿರುವ ಮಹಾರಾಷ್ಟ್ರ ಸಿಎಂ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬಗ್ಗಾ ಮುಂಬೈ ಪೊಲೀಸರಿಗೆ ದೂರಿನಲ್ಲಿ ಆಗ್ರಹಿಸಿದ್ದಾರೆ.
ಇದನ್ನು ಓದಿ:ಲಗೇಜುಗಳ ಸಮೇತ ಮುಖ್ಯಮಂತ್ರಿಗಳ ಅಧಿಕೃತ ಬಂಗಲೆ ತೊರೆದ ಉದ್ಧವ್ ಠಾಕ್ರೆ!