ಪೂರ್ವ ಚಂಪಾರಣ್ (ಬಿಹಾರ): ಇಟ್ಟಿಗೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಐವರು ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ಬಿಹಾರದ ಮೋತಿಹಾರಿಯಲ್ಲಿ ನಡೆದಿದೆ. ಹಲವರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇಟ್ಟಿಗೆ ಕಾರ್ಖಾನೆಯಲ್ಲಿ ಸ್ಫೋಟ: ಐವರು ಕಾರ್ಮಿಕರ ದುರ್ಮರಣ - ಸ್ಫೋಟ ಸಂಭವಿಸಿ ಕಾರ್ಮಿಕರ ಸಾವು
ಬಿಹಾರದ ಮೋತಿಹಾರಿಯಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ.
ಇಟ್ಟಿಗೆ ಕಾರ್ಖಾನೆಯಲ್ಲಿ ಸ್ಫೋಟ: ಐವರು ಕಾರ್ಮಿಕರ ದುರ್ಮರಣ
ಇಟ್ಟಿಗೆ ಗೂಡು ಚಿಮಣಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಇದುವರೆಗೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಅಂದಾಜು 15 ಮಂದಿ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು, ಅವರನ್ನು ತೆಗೆಯುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ರಕ್ಷಣಾ ತಂಡಗಳು ದೌಡಾಯಿಸಿವೆ.
ಇದನ್ನೂ ಓದಿ:ಭಾರತ-ಚೀನಾ ಗಡಿ ಸಮೀಪ ಕಮರಿಗೆ ಬಿದ್ದ ಸೇನಾ ವಾಹನ: 16 ಯೋಧರು ಹುತಾತ್ಮ