ಮೊರೆನಾ(ಮಧ್ಯಪ್ರದೇಶ):ರಾಜ್ಯದ ಮೊರೆನಾ ಜಿಲ್ಲೆಯ ಬನ್ಮೋರ್ ಪಟ್ಟಣದ ಪಟಾಕಿ ಕಾರ್ಖಾನೆಯ ಗೋಡೌನ್‌ನಲ್ಲಿ ಗುರುವಾರ ಬೆಳಗ್ಗೆ ಭೀಕರ ಸ್ಫೋಟ ಸಂಭವಿಸಿದ್ದು ನಾಲ್ವರು ಸಾವಿಗೀಡಾಗಿದ್ದಾರೆ. ದುರ್ಘಟನೆಯಲ್ಲಿ 7ಕ್ಕಿಂತ ಹೆಚ್ಚು ಜನರು ತೀವ್ರ ಗಾಯಗೊಂಡರು. ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಮೊರೆನಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಬಾಗ್ರಿ ತಿಳಿಸಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ದೀಪಾವಳಿ ಹೊಸ್ತಿಲಲ್ಲಿ ನಾಲ್ಕು ಕುಟುಂಬದಲ್ಲಿ ಕತ್ತಲು - ಪಟಾಕಿ ಸ್ಪೋಟ ಕುಸಿದು ಬಿದ್ದ ಗೋಡೌನ್
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಬನ್ಮೋರ್ ಪಟ್ಟಣದ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವಿಗೀಡಾಗಿದ್ದು, 7ಕ್ಕಿಂತ ಹೆಚ್ಚು ಜನರು ತೀವ್ರ ಗಾಯಗೊಂಡಿದ್ದಾರೆ.
ಬೆಳಗ್ಗೆ ಸುಮಾರು 11 ಗಂಟೆಗೆ ಸ್ಫೋಟ ಸಂಭವಿಸಿದ್ದು, ತಕ್ಷಣ ಕಾರ್ಖಾನೆ ಕುಸಿದು ಬಿದ್ದಿದೆ. ಕಟ್ಟಡದೊಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಒಂದೇ ಕುಟುಂಬಕ್ಕೆ ಸೇರಿದವರು. ಸುಮಾರು 7 ಜನರು ಮಣ್ಣಿನ ಅವಶೇಷಗಳಡಿ ಸಿಲುಕಿದ್ದರು. ಸ್ಥಳೀಯರ ಸಹಕಾರ ಹಾಗೂ ಪೊಲೀಸರು ಕೈಗೊಂಡ ಸಕಾಲಿಕ ಕಾರ್ಯಾಚರಣೆ ಅವಶೇಷಗಳಡಿ ಸಿಲುಕಿದ್ದ ಏಳು ಜನರನ್ನು ಶೀಘ್ರ ಹೊರ ತೆಗೆಯಲು ಅನುವಾಯಿತು. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಜೆಜೆ ಆಸ್ಪತ್ರೆ ಶೂಟೌಟ್ ಪ್ರಕರಣ: 20 ವರ್ಷಗಳ ನಂತರ ಕೇಸ್ ರೀ ಓಪನ್, ದಾವೂದ್ ಸಹಚರನಿಗೆ ಸಂಕಷ್ಟ