ಹಲ್ದ್ವಾನಿ ( ಉತ್ತರಾಖಂಡ್): ಇಲ್ಲಿನ ನೈನಿತಾಲ್ ಬಿಜೆಪಿ ಜಿಲ್ಲಾಧ್ಯಕ್ಷ ಪ್ರದೀಪ್ ಬಿಶ್ತ್ ಅವರ ಮನೆಯಲ್ಲಿ ಮಂಗಳವಾರ ತಡರಾತ್ರಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಬಾಗಿಲು, ಕಿಟಕಿಗಳು ಸಂಪೂರ್ಣ ನಾಶವಾಗಿದೆ. ರಾತ್ರಿ ಸುಮಾರು 12:30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಇಡೀ ಪ್ರದೇಶದವರನ್ನ ಬೆಚ್ಚಿ ಬೀಳಿಸಿದೆ.
ಸ್ಫೋಟದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಆಡಳಿತ ತಂಡ ಸ್ಥಳಕ್ಕೆ ತಲುಪಿತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಧೀರಜ್ ಸಿಂಗ್ ಗರ್ಬಯಾಲ್ ಕೂಡ ಘಟನಾ ಸ್ಥಳಕ್ಕೆ ದೌಡಾಯಿಸಿದರು. ಸ್ಫೋಟ ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಲ್ಲದೇ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ. ತನಿಖೆ ಬಳಿಕ ಸ್ಫೋಟದ ನಿಖರ ಮಾಹಿತಿ ತಿಳಿಯಲಿದೆ ಎಂದು ಡಿಎಂ ತಿಳಿಸಿದ್ದಾರೆ.