ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೊನಿ ಜೆ ಬ್ಲಿಂಕೆನ್ ಪ್ರಾದೇಶಿಕ ಸವಾಲುಗಳು, ಕೋವಿಡ್ -19 ನಿರ್ವಹಣೆಯಲ್ಲಿ ಸಹಕಾರ, ಹವಾಮಾನ ಬದಲಾವಣೆ, ಪ್ರಾದೇಶಿಕ ಭದ್ರತೆ, ಪ್ರಜಾಪ್ರಭುತ್ವ ತತ್ವಗಳ ಕುರಿತು ಚರ್ಚೆ ನಡೆಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಯುಎಸ್ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್, ಯುಎಸ್ ವಿದೇಶಾಂಗ ಕಾರ್ಯದರ್ಶಿ ಜೆ ಬ್ಲಿಂಕೆನ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಅವರು ಅಮೆರಿಕ ಮತ್ತು ಭಾರತದ ನಡುವಿನ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಗಟ್ಟಿಗೊಳಿಸುವ ಕುರಿತು ಮತ್ತು ಹವಾಮಾನ ಬದಲಾವಣೆ, ಪ್ರಾದೇಶಿಕ ಭದ್ರತೆ ಸೇರಿದಂತೆ ಹಲವು ವಿಷಯಗಳಲ್ಲಿ ಅಮೆರಿಕ, ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್ ನಡುವಿನ ಸಹಕಾರದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.