ಕರ್ನಾಟಕ

karnataka

ETV Bharat / bharat

ಯಮುನಾ ನದಿಯಲ್ಲಿ ಮುಳುಗಿದ ದೋಣಿ.. 11 ಮೃತದೇಹ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮಾರ್ಕಾ ಪ್ರದೇಶದಲ್ಲಿ ಯಮುನಾ ನದಿಯಲ್ಲಿ ದೋಣಿ ಮುಳುಗಿ ಹಲವರು ನೀರು ಪಾಲಾಗಿದ್ದು, 11 ಮೃತದೇಹಗಳು ಪತ್ತೆಯಾದ ದಾರುಣ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

boat sunk in yamuna river
Etv Bharat,ಯಮುನಾ ನದಿಯಲ್ಲಿ ಮುಳುಗಿದ ದೋಣಿ

By

Published : Aug 12, 2022, 12:52 PM IST

Updated : Aug 13, 2022, 12:12 PM IST

ಉತ್ತರ ಪ್ರದೇಶ: ಬಾಂದಾ ಜಿಲ್ಲೆಯ ಮಾರ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಯುಮುನಾ ನದಿಯಲ್ಲಿ 40 ಜನರಿದ್ದ ದೋಣಿ ಮುಳುಗಿರುವ ಘಟನೆ ಗುರುವಾರ ಸಂಜೆ ನಡೆದಿದ್ದು, ಈಗಾಗಲೇ 11 ಶವಗಳನ್ನು ಹೊರ ತೆಗೆಯಲಾಗಿದೆ. ಉಳಿದವರಿಗಾಗಿ ಇಂದೂ ಕೂಡಾ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಆ.11ರಂದು ಫತೇಪುರದಿಂದ ಮರ್ಕಾ ಗ್ರಾಮಕ್ಕೆ ತೆರಳುತ್ತಿದ್ದ ದೋಣಿ ಯಮುನಾ ನದಿ ಪ್ರವಾಹದ ಸುಳಿಗೆ ಸಿಲುಕಿ ದುರಂತ ಸಂಭವಿಸಿತ್ತು. ದೋಣಿಯಲ್ಲಿ ಮಹಿಳೆಯರು, ಪುರುಷರು ಮತ್ತು ಮಕ್ಕಳು ಸೇರಿದಂತೆ ಒಟ್ಟು 40 ಮಂದಿ ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ.

ಯಮುನಾ ನದಿಯಲ್ಲಿ ಮುಳುಗಿದ ದೋಣಿ

ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ್ದ ಪೊಲೀಸರು, ಸ್ಥಳೀಯ ಮುಳುಗು ತಜ್ಞರ ಸಹಾಯದಿಂದ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಎಸ್​ಪಿ ನೇತೃತ್ವದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಮೊನ್ನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಈಗಾಗಲೇ 11 ಶವಗಳನ್ನು ಹೊರ ತೆಗೆಯಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ನೆರವು ನೀಡುವುದಾಗಿ ಘೋಷಿಸಲಾಗಿದೆ. ಮೃತರು ಫತೇಪುರ್ ಜಿಲ್ಲೆಯ ಅಸೋಥರ್ ಪ್ರದೇಶದ ಲಕ್ಷ್ಮಣ್ ಪುರ್ವಾ ಗ್ರಾಮದ ನಿವಾಸಿಯಾಗಿದ್ದು, ರಕ್ಷಾಬಂಧನ ಹಿನ್ನೆಲೆ ಬಂದಾಗೆ ಬರುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ಬಾಂದ್ರಾ ನದಿಯಲ್ಲಿ ಕೊಚ್ಚಿ ಹೋದ ಯುವಕರು.. ಓರ್ವನ ಮೃತದೇಹ ಪತ್ತೆ

Last Updated : Aug 13, 2022, 12:12 PM IST

ABOUT THE AUTHOR

...view details