ಕರ್ನಾಟಕ

karnataka

ETV Bharat / bharat

ಕಣ್ಣೂರಿನಲ್ಲಿ RSS ಕಚೇರಿ ಮೇಲೆ ಬಾಂಬ್ ದಾಳಿ: ಕಿಟಕಿ ಗಾಜು ಪುಡಿಪುಡಿ - ಬಾಂಬ್ ದಾಳಿ

ಇಂದು ಮುಂಜಾನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ.

Bomb attack at RSS office in Kannur
ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ

By

Published : Jul 12, 2022, 10:08 AM IST

ಕಣ್ಣೂರು(ಕೇರಳ):ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌ಎಸ್‍ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಮುಂಜಾನೆ ಘಟನೆ ಸಂಭವಿಸಿದೆ. ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಒಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.


ದಾಳಿಯ ಹಿಂದೆ ಸಿಪಿಎಂ ಕೈವಾಡವಿದೆ ಎಂದು ಆರ್‌ಎಸ್‌ಎಸ್ ಆರೋಪಿಸಿದೆ. ಜು.11 ರಂದು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರಿಂದ ಹತ್ಯೆಗೀಡಾದ ಪಯ್ಯನ್ನೂರು ರಾಮಂತಳ್ಳಿಯ ಸಿಪಿಎಂ-ಡಿವೈಎಫ್‌ಐ ಕಾರ್ಯಕರ್ತ ಧನರಾಜ್ ಅವರ ಪುಣ್ಯತಿಥಿಯ ನಂತರ ಈ ದಾಳಿ ನಡೆದಿದೆ. ಬಾಂಬ್ ದಾಳಿ ನಡೆಸಿದವರು ಯಾರು? ಯಾವ ಕಾರಣಕ್ಕಾಗಿ ಕೃತ್ಯ ಎಸಗಲಾಗಿದೆ? ಎಂಬಿತ್ಯಾದಿ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details