ಪುಣೆ ರೈಲು ನಿಲ್ದಾಣದಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆ
ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣದಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆಯಾಗಿ ಆತಂಕ ಸೃಷ್ಟಿಸಿದ್ದು, ತಪಾಸಣೆ ಮಾಡಿದ ಅಧಿಕಾರಿಗಳು ಮೂರು ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪುಣೆ ರೈಲು ನಿಲ್ದಾಣದಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆ
ಪುಣೆ(ಮಹಾರಾಷ್ಟ್ರ):ಬಾಂಬ್ ರೀತಿಯ ವಸ್ತು ಪತ್ತೆಯಾದ ಕಾರಣದಿಂದ ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣ ಪ್ರದೇಶವನ್ನು ಪೊಲೀಸರು ತೆರವು ಮಾಡಿದ್ದಾರೆ. ತಪಾಸಣೆ ವೇಳೆ ಮೂರು ಜಿಲೆಟಿನ್ ಕಡ್ಡಿಗಳು ದೊರೆತಿದ್ದು, ಅವುಗಳನ್ನು ವಿಲೇವಾರಿ ಮಾಡಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದರ ಜೊತೆಗೆ, ತನಿಖೆ ನಡೆಯುತ್ತಿದೆ.