ಹೈದರಾಬಾದ್(ತೆಲಂಗಾಣ): ಸಿಕಂದರಾಬಾದ್ ರೈಲ್ವೆ ಪೊಲೀಸರಿಗೆ ಅಪರಿಚಿತ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಬಂದಿದೆ. ಶಬರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇದೆ ಎಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ.
ಶಬರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್.. ಬೆದರಿಕೆ ಕರೆಗೆ ಎಚ್ಚೆತ್ತ ಪೊಲೀಸ್, ತೀವ್ರಗೊಂಡ ಶೋಧ - ಸಿಕಂದರಾಬಾದ್ ರೈಲ್ವೆ ಪೊಲೀಸರಿಗೆ ಅಪರಿಚಿತ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ
ಸಿಕಂದರಾಬಾದ್ ರೈಲ್ವೆ ಪೊಲೀಸರಿಗೆ ಅಪರಿಚಿತ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಬಂದಿದೆ. ಎಚ್ಚೆತ್ತ ಪೊಲೀಸರು ಬಾಂಬ್ ಸ್ಕ್ವಾಡ್‌ನೊಂದಿಗೆ ಶೋಧ ನಡೆಸುತ್ತಿದ್ದಾರೆ. ಇಲ್ಲಿಯವರೆಗೆ ಅವರಿಗೆ ಯಾವುದೇ ರೀತಿಯ ಬಾಂಬ್ ಕಾಣಿಸಿಕೊಂಡಿಲ್ಲ.
Bomb threat call to Sabari Express train
ಬೆದರಿಕೆ ಕರೆಯಿಂದ ತಕ್ಷಣ ಎಚ್ಚೆತ್ತ ಪೊಲೀಸರು ಬಾಂಬ್ ಸ್ಕ್ವಾಡ್‌ನೊಂದಿಗೆ ಶೋಧ ನಡೆಸುತ್ತಿದ್ದಾರೆ. ಇಲ್ಲಿಯವರೆಗೆ ಅವರಿಗೆ ಬಾಂಬ್ ಪತ್ತೆಯಾಗಿಲ್ಲ. ಈ ಬಗ್ಗೆ ಸಿಕಂದರಾಬಾದ್ ಪೊಲೀಸರು ಮಾಹಿತಿ ನೀಡಿದ್ದು, ಶಬರಿ ಎಕ್ಸ್‌ಪ್ರೆಸ್‌ನಲ್ಲಿ ಬಾಂಬ್ ಇಲ್ಲ. ರೈಲಿನಲ್ಲಿ ಶ್ವಾನ ಮತ್ತು ಬಾಂಬ್ ಸ್ಕ್ವಾಡ್ ಸಹಾಯದಿಂದ ಒಂದೂವರೆ ಗಂಟೆಗಳ ಕಾಲ ಶೋಧ ನಡೆಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಪಕ್ಷ ಕಟ್ಟುವ ಕೆಲಸಕ್ಕಿಂತ ನಿರ್ನಾಮಗೊಳಿಸುವುದಕ್ಕೆ ಕೈ ಹಾಕಿದ್ದಾರೆ.. ಮಾಜಿ ಸಂಸದ ಮುದ್ದಹನುಮೇಗೌಡ