ಮುಂಬೈ(ಮಹಾರಾಷ್ಟ್ರ): ಕೇಂದ್ರ ಸಚಿವ ನಾರಾಯಣ ರಾಣೆ ಅವರು ಅನಧಿಕೃತವಾಗಿ ನಿರ್ಮಾಣ ಮಾಡಿರುವ ಬಂಗಲೆ ಕೆಡವಲು ಬಿಎಂಸಿಗೆ ಬಾಂಬೆ ಹೈಕೋರ್ಟ್ ನಿರ್ದೇಶನ ನೀಡಿದ್ದು, 10 ಲಕ್ಷ ರೂಪಾಯಿ ದಂಡ ವಿಧಿಸಿ ಮಹತ್ವದ ಆದೇಶ ಹೊರಹಾಕಿದೆ.
ಮುಂಬೈ ಜುಹುದಲ್ಲಿರುವ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಬಂಗಲೆ ಅಕ್ರಮವಾಗಿ ನಿರ್ಮಾಣಗೊಂಡಿದ್ದು, ಅದನ್ನು ಕೆಡವಲು ಹೈಕೋರ್ಟ್ ಆದೇಶಿಸಿದೆ ಎಂದು ಅರ್ಜಿದಾರರ ಪರ ವಕೀಲ ಆದಿತ್ಯ ಪ್ರತಾಪ್ ತಿಳಿಸಿದ್ದಾರೆ.
ಇದನ್ನೂ ಓದಿ:ಮಾರ್ಚ್ ವೇಳೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ: ಕೇಂದ್ರ ಸಚಿವ ನಾರಾಯಣ ರಾಣೆ
ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್(ಬಿಎಂಸಿ) ಈ ಹಿಂದೆ ಕೇಂದ್ರ ಸಚಿವರಿಗೆ ಬಂಗಲೆ ಅಕ್ರಮ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಇದೀಗ ಮಹತ್ವದ ಆದೇಶ ಹೊರಬಿದ್ದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ನಾರಾಯಣ ರಾಣೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.