ಲಖನೌ (ಉತ್ತರ ಪ್ರದೇಶ): ಕೊಳವೆ ಬಾವಿಯಲ್ಲಿ ಬಾಲಕನೊಬ್ಬ ಬಿದ್ದು, ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದಿದೆ.
ತೆರೆದ ಕೊಳವೆ ಬಾವಿಯೊಳಗೆ ಬಿದ್ದ ಬಾಲಕ ಕುಲ್ಪಹಾರ್ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದ್ದು, ಆಡುತ್ತಾ ಹೊರಟ್ಟಿದ್ದ ನಾಲ್ಕು ವರ್ಷದ ಬಾಲಕ ಧನೇಂದ್ರ ಅಲಿಯಾಸ್ ಬಾಲು ಎಂಬಾತ ಆಕಸ್ಮಿಕವಾಗಿ ತೆರೆದಿದ್ದ ಕೊಳವೆ ಬಾವಿಯೊಳಗೆ ಬಿದ್ದಿದ್ದಾನೆ.
ಇದನ್ನೂ ಓದಿ:ದೋಣಿ ಮಗುಚಿ ಒಂದೇ ಕುಟುಂಬದ ಐವರ ದುರ್ಮರಣ
ಬುಧವಾರ ಮಧ್ಯಾಹ್ನ 2.30ಕ್ಕೆ ಘಟನೆ ಸಂಭವಿಸಿದ್ದು, ಸುಮಾರು 25ರಿಂದ 30 ಅಡಿ ಆಳದಲ್ಲಿ ಬಾಲಕ ಧನೇಂದ್ರ ಸಿಲುಕಿದ್ದಾನೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಸ್ಥಳಕ್ಕೆ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಸ್ಥಳಕ್ಕೆ ಆಗಮಿಸಿದ್ದು, ಮೂರು ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸತ್ಯೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.