ಶಿಮ್ಲಾ/ಚಂಡೀಗಢ: ಮೊಹಾಲಿಯ ಚಂಡೀಗಢ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋಗಳು ಸೋರಿಕೆಯಾಗಿವೆ ಎಂಬ ವದಂತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿದ್ಯಾರ್ಥಿನಿಯ ಆಪಾದಿತ ಗೆಳೆಯನನ್ನು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಬಂಧಿಸಲಾಗಿದೆ. ಪೊಲೀಸರು ಯುವಕನನ್ನು ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ಯುವಕ ವಿಡಿಯೋವನ್ನು ಶೇರ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿತ ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಸೇರಿ ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಯುವಕ ಶಿಮ್ಲಾದ ಧಾಲಿ ಪ್ರದೇಶದವನು ಎಂದು ಗುರುತಿಸಲಾಗಿದೆ.
ವಿಡಿಯೋ ಬಹಿರಂಗವಾದ ನಂತರ ವಿಶ್ವವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಮತ್ತು ವಿವಿ ಆಡಳಿತ ಮಂಡಳಿ ಈ ವಿಚಾರವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಬಾರದು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಪ್ರತಿಭಟನೆ ಹೆಚ್ಚಾಗುತ್ತಿರುವ ಕಾರಣ ಆಡಳಿತ ಮಂಡಳಿ ವಿವಿಗೆ ಸಪ್ಟೆಂಬರ್ 19 ಮತ್ತು 20ರಂದು ರಜೆ ಘೋಷಿಸಿದೆ.