ಅಲಿಗಢ(ಉತ್ತರ ಪ್ರದೇಶ):ಮದುವೆ ಮಾಡಿಕೊಳ್ಳುವಂತೆ ಪ್ರೇಯಸಿ ಒತ್ತಡ ಹೇರಿದ್ದಕ್ಕಾಗಿ ಪ್ರಿಯಕರನೋರ್ವ ಓವರ್ ಡೋಸ್ ಇಂಜೆಕ್ಷನ್ ನೀಡಿ ಕೊಲೆಗೈದಿರುವ ಘಟನೆ ಅಲಿಗಢದಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕ್ವಾರ್ಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ.
ಯುವತಿಯೋರ್ವಳು ತನ್ನನ್ನು ಮದುವೆ ಮಾಡಿಕೊಳ್ಳುವಂತೆ ಪ್ರಿಯಕರನ ಮೇಲೆ ಒತ್ತಡ ಹಾಕಿದ್ದಾಳೆ ಎನ್ನಲಾಗಿದೆ. ಇದರಿಂದ ಕುಪಿತಗೊಂಡಿರುವ ಆತ ಓವರ್ ಡೋಸ್ ಇಂಜೆಕ್ಷನ್ ನೀಡಿದ್ದಾನೆ. ಮೃತ ಯುವತಿಯ ಸಂಬಂಧಿಕರು ನೀಡಿರುವ ದೂರಿನ ಆಧಾರದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ವೇಳೆ ಆತ ಕೃತ್ಯ ಒಪ್ಪಿಕೊಂಡಿದ್ದಾನೆ.
ಇದನ್ನೂ ಓದಿ:'ಪದ್ಮಶ್ರೀ' ಪ್ರಶಸ್ತಿ ಸ್ವೀಕರಿಸಿದ ಚಿನ್ನದ ಹುಡುಗ ನೀರಜ್ ಚೋಪ್ರಾ: ವಿಡಿಯೋ
ಮೃತ ಯುವತಿ ಮತ್ತು ರಿಜ್ವಾನ್ ಖಾಸಗಿ ನರ್ಸಿಂಗ್ ಹೋಂನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ನಡುವೆ ಇಬ್ಬರಲ್ಲೂ ಪ್ರೇಮಾಂಕುರವಾಗಿದೆ. ದೈಹಿಕ ಸಂಬಂಧವನ್ನೂ ಬೆಳೆಸಿದ್ದಾರೆ. ಈ ವೇಳೆ ತನ್ನನ್ನು ಮದುವೆ ಮಾಡಿಕೊಳ್ಳುವಂತೆ ಆಕೆ ತಿಳಿಸಿದ್ದಳಂತೆ.
ಒಂದು ವೇಳೆ ಮದುವೆ ಮಾಡಿಕೊಳ್ಳಲು ನಿರಾಕರಿಸಿದರೆ ತನ್ನ ಬಳಿ ಇರುವ ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿಯೂ ಹೇಳಿದ್ದಳಂತೆ. ಇದರಿಂದ ಕೋಪಗೊಂಡಿರುವ ರಿಜ್ವಾನ್, ಯುವತಿಗೆ ಚುಚ್ಚುಮದ್ದು ನೀಡಿ, ಕೊಲೆಗೈದಿದ್ದಾನೆ. ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದಾಗ ಓವರ್ ಡೋಸ್ ಇಂಜೆಕ್ಷನ್ ನೀಡಿರುವುದು ಗೊತ್ತಾಗಿದೆ. ಯುವತಿ ಸಾವನ್ನಪ್ಪಿದ್ದ ಸ್ಥಳದಲ್ಲಿ ಕೆಲವೊಂದು ಸಿರಿಂಜ್ಗಳು ಕೂಡಾ ಪತ್ತೆಯಾಗಿವೆ.