ರೇವಾ(ಮಧ್ಯಪ್ರದೇಶ):ತಾನು ಪ್ರೀತಿಸುತ್ತಿದ್ದ ಯುವತಿಯೋರ್ವಳು ಸಹಕಾರ ನೀಡಲಿಲ್ಲ(ದೈಹಿಕ ಸಂಪರ್ಕ) ಎಂಬ ಕಾರಣಕ್ಕಾಗಿ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ರೇವಾದಲ್ಲಿನ ಮಂಗವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.
ಕಳೆದ ಕೆಲ ತಿಂಗಳಿಂದ ಮಂಗವಾನ್ ಗ್ರಾಮದ ಯುವಕ ಆನಂದ್ ಪಟೇಲ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಗುರುವಾರ ರಾತ್ರಿ 12 ಗಂಟೆಗೆ ಆರೋಪಿ ಯುವತಿ ಭೇಟಿ ಮಾಡಲು ಬಂದಿದ್ದಾನೆ. ಈ ವೇಳೆ ಆತನೊಂದಿಗೆ ಕೆಲ ಸ್ನೇಹಿತರು ಬಂದಿದ್ದರು. ಎಲ್ಲರೂ ಸೇರಿ ಆಕೆಗೆ ಕಿರುಕುಳ ನೀಡಲು ಮುಂದಾಗಿದ್ದು, ದೈಹಿಕವಾಗಿ ಸಹಕಾರ ನೀಡುವಂತೆ ಕೇಳಿದ್ದಾರೆ. ಆದರೆ ಇದಕ್ಕೆ ಆಕೆ ಪ್ರತಿಭಟಿಸಿದ್ದಾಳೆ. ಇದರಿಂದ ಆಕ್ರೋಶಗೊಂಡು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.