ಲೋಹರ್ಡಗಾ(ಜಾರ್ಖಂಡ್): ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ನಾಚಿಕೆಗೇಡಿನ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಕಾಮುಕ ಸಹೋದರನೋರ್ವ ತನ್ನಿಬ್ಬರು ಸಹೋದರಿಯರ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದರ ಬೆನ್ನಲ್ಲೇ ಹೆತ್ತ ತಾಯಿ ಮೇಲೂ ದುಷ್ಕೃತ್ಯಕ್ಕೆ ಮುಂದಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನ ಮಾಡಲಾಗಿದೆ.
ಲೋಹರ್ಡಗಾ ಪ್ರದೇಶದ ನಿವಾಸಿ ಗ್ಯಾರೇಜ್ನಲ್ಲಿ ರಿಪೇರಿ ಕೆಲಸ ಮಾಡ್ತಿದ್ದ. ಮನೆಯಲ್ಲಿ ವಾಸವಾಗಿದ್ದ ಇಬ್ಬರು ಅಪ್ರಾಪ್ತೆಯರ ಮೇಲೆ ಈ ಕೃತ್ಯ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.