ಮುಂಬೈ(ಮಹಾರಾಷ್ಟ್ರ): ತೆಲಂಗಾಣದ ಭಾರತ ರಾಷ್ಟ್ರ ಸಮಿತಿ ಮಹಾರಾಷ್ಟ್ರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾರೀ ಸದ್ದು ಮಾಡಿದೆ. ಭಂಡಾರ ಮತ್ತು ನಾಂದೇಡ್ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿಗಳನ್ನು ಗೆಲ್ಲುವ ಮೂಲಕ ಬಿಆರ್‌ಎಸ್ ನೆರೆ ರಾಜ್ಯದಲ್ಲೂ ರಾಜಕೀಯ ಅಸ್ತಿತ್ವವನ್ನು ಕಂಡುಕೊಂಡಿದೆ.
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿತ್ತು. ವಿದರ್ಭದ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಬಿಆರ್‌ಎಸ್ ಖಾತೆ ತೆರೆದಿದೆ. ಭಂಡಾರ ಜಿಲ್ಲೆಯೊಂದರಲ್ಲೇ 19 ಗ್ರಾಮ ಪಂಚಾಯಿತಿಗಳಲ್ಲಿ ಬಿಆರ್‌ಎಸ್ ವಿಜಯ ಪತಾಕೆಯನ್ನು ಹಾರಿಸಿದೆ ಎಂದು ಮಾಜಿ ಶಾಸಕ ಮತ್ತು ಬಿಆರ್‌ಎಸ್ ಮುಖಂಡ ಚರಣ್ ವಾಘ್ಮರೆ ಹೇಳಿದ್ದಾರೆ. ನಾಂದೇಡ್ ನಲ್ಲಿಯೂ ಗುಲಾಬಿ ಪಕ್ಷ ಚಂಡಮಾರುತ ಸೃಷ್ಟಿಸಿದೆ ಎಂಬುದು ಈ ಚುನಾವಣೆಯಿಂದ ಸ್ಪಷ್ಟವಾಗಿದೆ. ಆದ್ದರಿಂದ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ, ಎಸ್ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆಯ ಎರಡೂ ಮೈತ್ರಿಕೂಟಗಳಿಗೆ ಪೈಪೋಟಿ ನೀಡುವುದಾಗಿ ಭಾರತ ರಾಷ್ಟ್ರ ಸಮಿತಿ ಸ್ಪಷ್ಟಪಡಿಸಿದೆ.
ಭಂಡಾರ ಜಿಲ್ಲೆಯ 66 ಗ್ರಾಪಂಗಳ ಫಲಿತಾಂಶವನ್ನು ಸೋಮವಾರ ಪ್ರಕಟಿಕೊಂಡಿದೆ. ಈ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಬಿಆರ್‌ಎಸ್, 11 ಗ್ರಾಪಂಗಳನ್ನು ವಶಪಡಿಸಿಕೊಂಡಿದೆ. ಆಡಳಿತಾರೂಢ ಬಿಜೆಪಿಗೆ ಸೆಡ್ಡು ಹೊಡೆದಿರುವುದರ ಜೊತೆಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಳೆಗೆ ಅವರದೇ ಜಿಲ್ಲೆಯಲ್ಲಿ ಕಾಂಗ್ರೆಸ್ ಅನ್ನು ಬಿಟ್ಟು ಮುಂಬರುವ ಚುನಾವಣೆಯಲ್ಲಿ ನಾವು ಸ್ಪರ್ಧಿಸಲು ಸಿದ್ಧ ಎಂಬ ಸಂದೇಶ ರವಾನಿಸಿದೆ.