ಧೋಲ್‌ಪುರ (ರಾಜಸ್ಥಾನ): ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮವನ್ನು ಸ್ವೀಕರಿಸಿದ್ದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ದೇಹವನ್ನು ಕತ್ತರಿಸಿರುವ ಭೀಕರ ಘಟನೆ ರಾಜಸ್ಥಾನದ ಧೋಲ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಭೀಮಗಢದ ನಿವಾಸಿ ವಹಾಬುದ್ದೀನ್ ಖಾನ್ (60) ಎಂಬಾತನೇ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಿಂದೂ ಧರ್ಮವನ್ನು ಸ್ವೀಕರಿಸಿದ್ದ ಖಾನ್ ಕಳೆದ ಹತ್ತು ವರ್ಷಗಳಿಂದ ಇಲ್ಲಿನ ತೋಂಟರಿ ಗ್ರಾಮದ ದೇವಸ್ಥಾನದಲ್ಲಿ ಅರ್ಚಕರಾಗಿದ್ದರು. ಆದರೆ, ಮಂಗಳವಾರ ರಾತ್ರಿ ಖಾನ್ ಅವರನ್ನು ಕೊಲೆ ಮಾಡಿ ದೇಹವನ್ನು ಕತ್ತರಿಸಿ, ನಾಲ್ಕು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ ಪಾರ್ವತಿ ನದಿಯ ದಡದ ಪೊದೆಗಳಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.