ಅನಂತ್ನಾಗ್ (ಜಮ್ಮು-ಕಾಶ್ಮೀರ):ಅಮರನಾಥ ಯಾತ್ರೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಜೆಎನ್‌ವಿ ಅಶ್ಮುಖಮ್ ಪ್ರದೇಶದಲ್ಲಿ ಕರ್ತವ್ಯದಲ್ಲಿ ಇರುವಾಗಲೇ ಅಸ್ಸೋಂ ಮೂಲದ ಸೈನಿಕ ಸರ್ವಿಸ್ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಇದರಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಸಹೋದ್ಯೋಗಿಗಳು ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ವೈದ್ಯರು ಮೃತಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಅಮರನಾಥ ಯಾತ್ರೆಯ ಭದ್ರತೆಗಿದ್ದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ - ಅಮರನಾಥ್ ಯಾತ್ರೆಗೆ ಭದ್ರತೆ
ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಕರ್ತವ್ಯದಲ್ಲಿ ಇರುವಾಗಲೇ ಅಸ್ಸೋಂ ಮೂಲದ ಸೈನಿಕ ಸರ್ವಿಸ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಮರನಾಥ್ ಯಾತ್ರೆಯ ಭದ್ರತೆಗಿದ್ದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ