ಕರ್ನಾಟಕ

karnataka

ETV Bharat / bharat

ಚುನಾವಣೆಯಲ್ಲಿ ಮಾಯಾವತಿ ಸ್ಪರ್ಧಿಸುವುದಿಲ್ಲ: ಬಿಎಸ್​​​​​ಪಿ ಪ್ರಧಾನ ಕಾರ್ಯದರ್ಶಿ ಸತೀಶ್​ಚಂದ್ರ ಮಿಶ್ರಾ

ಬಿಎಸ್​​​​ಪಿ ನಾಯಕಿ ಮಾಯಾವತಿ ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್​ ಚಂದ್ರ ಮಿಶ್ರಾ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ತಾವು ಮತ್ತು ಮಾಯಾವತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ ಮಾಯಾವತಿ
ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ ಮಾಯಾವತಿ

By

Published : Jan 11, 2022, 2:05 PM IST

ಲಖನೌ: ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ವಿವಿಧ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ನಿರತವಾಗಿವೆ. ಅತ್ತ ಬಿಎಸ್​​​​ಪಿ ಮುಖ್ಯಸ್ಥೆ ಮಾಯಾವತಿ ನಿರಂತರ ಪರಿಶೀಲನಾ ಸಭೆಗಳಲ್ಲಿ ನಿರತರಾಗಿದ್ದಾರೆ. ಪಕ್ಷದ ಗೆಲುವಿಗಾಗಿ ಪ್ರಬಲ ಸ್ಪರ್ಧಿಗಳಿಗಾಗಿ ಸ್ಕ್ರೀನಿಂಗ್ ನಡೆಸುತ್ತಿದ್ದಾರೆ.

ಏತನ್ಮಧ್ಯೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸತೀಶ್​ ಚಂದ್ರ ಮಿಶ್ರಾ, ನಾನು ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇವೆ ಎಂದು ಘೋಷಿಸಿದ್ದಾರೆ.

ಪಕ್ಷದ ಅಧ್ಯಕ್ಷರು ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾರೆ ಎಂದು ಅವರು ಇದೇ ವೇಳೆ ಹೇಳಿದರು. ಇದೇ ವೇಳೆ, ಸತೀಶ್​ ಚಂದ್ರ ಅವರು, ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಅಖಿಲೇಶ್​ ಯಾದವ್​ ಅವರು 400 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಹಗಲುಗನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಯುಪಿಯಲ್ಲಿ ಬಿಎಸ್‌ಪಿ ಸರ್ಕಾರ ರಚಿಸಲಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಬಿಜೆಪಿ ಮತ್ತು ಎಸ್‌ಪಿ ರಾಜ್ಯದ ಜನತೆಗೆ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದರು. ಮತದಾರರು ಈಗ ಬಿಎಸ್‌ಪಿಯಲ್ಲಿ ನಂಬಿಕೆ ಇಟ್ಟಿದ್ದು, ಬಿಎಸ್‌ಪಿ ಯಾವಾಗಲೂ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದು ಭರವಸೆ ನೀಡಿದರು.

ABOUT THE AUTHOR

...view details