ಕರ್ನಾಟಕ

karnataka

ETV Bharat / bharat

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಬಹಿಷ್ಕರಿಸಿದ ಬಿಎಸ್​ಪಿ..! - ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ

ಕಾಂಗ್ರೆಸ್, ಎನ್‌ಸಿಪಿ, ಶಿವಸೇನೆ ಮತ್ತು ಟಿಎಂಸಿ ಸೇರಿದಂತೆ 18 ವಿರೋಧ ಪಕ್ಷಗಳು ಅಧ್ಯಕ್ಷರ ಭಾಷಣ ಬಹಿಷ್ಕರಿಸಲು ನಿರ್ಧರಿಸಿದ್ದು, ಇದೀಗ ಬಿಎಸ್​ಪಿಯೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣವನ್ನು ಬಹಿಷ್ಕರಿಸಿದೆ.

Mayawati
ಬಿಎಸ್​ಪಿ

By

Published : Jan 29, 2021, 12:02 PM IST

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಹಿತಾಸಕ್ತಿ ವಿರುದ್ಧವಾಗಿದ್ದು ‘ಡಿಲ್ಲಿ-ಡಲ್ಲಿಂಗ್’ ಎಂದು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಅಲ್ಲದೇ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣ ಬಹಿಷ್ಕರಿಸುವುದಾಗಿ ಹೇಳಿದರು.

ನಿನ್ನೆಯಷ್ಟೇ ಕಾಂಗ್ರೆಸ್, ಎನ್‌ಸಿಪಿ, ಶಿವಸೇನೆ ಮತ್ತು ಟಿಎಂಸಿ ಸೇರಿದಂತೆ 18 ವಿರೋಧ ಪಕ್ಷಗಳು ಅಧ್ಯಕ್ಷರ ಭಾಷಣವನ್ನು ಬಹಿಷ್ಕರಿಸಲು ನಿರ್ಧರಿಸಿದ್ದರು. ಈ ಬೆನ್ನಲ್ಲೇ ಇಂದು ಬಿಎಸ್​ಪಿ ಈ ನಿರ್ಧಾರ ಕೈಗೊಂಡಿದೆ.

ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯದೇ ರೈತರ ಜೀವನದಲ್ಲಿ ಕೇಂದ್ರ ಸರ್ಕಾರ ಆಟವಾಡುತ್ತಿದೆ. ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಹಿಂಪಡೆಯಬೇಕೆಂದು ಮಾಯಾವತಿ ಆಗ್ರಹಿಸಿದ್ದಾರೆ. ಮೋದಿ ಸರ್ಕಾರ, ಕೃಷಿ ಕಾಯ್ದೆಗಳನ್ನು ಹಿಂಪಡೆದು ದೆಹಲಿ ಪರಿಸ್ಥಿತಿಯನ್ನು ನಿಭಾಯಿಸಬೇಕು. ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರಕ್ಕೆ ಮುಗ್ಧ ರೈತರನ್ನು ಹೊಣೆಗಾರರನ್ನಾಗಿ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಅಧ್ಯಕ್ಷರ ಭಾಷಣವನ್ನು ಕಾಂಗ್ರೆಸ್, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ, ರಾಷ್ಟ್ರೀಯ ಸಮ್ಮೇಳನ, ತೃಣಮೂಲ ಕಾಂಗ್ರೆಸ್, ಶಿವಸೇನೆ, ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾದಳ, ಕಮ್ಯುನಿಸ್ಟ್ ಪಕ್ಷ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಸಿಪಿಐ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆರ್‌ಎಸ್‌ಪಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ಎಂಡಿಎಂಕೆ, ಕೇರಳ ಕಾಂಗ್ರೆಸ್ (ಎಂ) ಮತ್ತು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್, ಡಿಎಂಕೆ ಪಕ್ಷಗಳು ಬಹಿಷ್ಕರಿಸಿವೆ.

ABOUT THE AUTHOR

...view details