ನವದೆಹಲಿ: 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಲು ದಿನಗಣನೇ ಆರಂಭಗೊಂಡಿದ್ದು, ಫೆ. 1ರಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಯವ್ಯಯ ಮಂಡನೆ ಮಾಡಲಿದ್ದಾರೆ. ಈ ಹಿಂದಿನ ಬಜೆಟ್ಗಳಿಗೆ ಹೋಲಿಕೆ ಮಾಡಿದಾಗ ಈ ಸಲದ ಕೇಂದ್ರ ಬಜೆಟ್ ಕೆಲವೊಂದಿಷ್ಟು ಹೊಸ ವಿಷಯಗಳಿಗೆ ನಾಂದಿಯಾಗಲಿದೆ.
ಯೂನಿಯನ್ ಬಜೆಟ್ 2022ರ ತಯಾರಿಕೆ ಪ್ರಕ್ರಿಯೆ ಈಗಾಗಲೇ ಅಂತಿಮ ಹಂತ ತಲುಪಿದ್ದು, ಇದೇ ಕಾರಣಕ್ಕಾಗಿ ಇಂದು ಸಿಬ್ಬಂದಿಗಳಿಗೆ ಸಿಹಿ ಹಂಚಿಕೆ ಮಾಡಲಾಯಿತು. ಕೋವಿಡ್-19 ಕಾರಣದಿಂದಾಗಿ ಪ್ರತಿ ವರ್ಷ ನಡೆಯುತ್ತಿದ್ದ ಹಲ್ವಾ ಸಮಾರಂಭದ ಬದಲಿಗೆ ಸಿಹಿತಿಂಡಿ ವಿತರಣೆ ಮಾಡಲಾಗಿದೆ.
ಕಳೆದ ವರ್ಷದಂತೆ ಈ ಸಲದ ಬಜೆಟ್ ಕೂಡ ಕಾಗದ ರಹಿತವಾಗಿ ಮಂಡನೆಯಾಗಲಿದೆ. ಆದರೆ, ಡಿಜಿಟಲ್ ರೂಪಕ್ಕೆ ಮತ್ತಷ್ಟು ಪುಷ್ಠಿ ನೀಡುವ ನಿಟ್ಟಿನಲ್ಲಿ ಮೊಬೈಲ್ ಅಪ್ಲಿಕೇಶನ್ ತಯಾರಿಸಲಾಗಿದೆ. 'ಯೂನಿಯನ್ ಬಜೆಟ್' ಹೆಸರಿನಲ್ಲಿ ಮೊಬೈಲ್ ಅಪ್ಲಿಕೇಶನ್ ಲಭ್ಯವಿದ್ದು, ರಾಷ್ಟ್ರೀಯ ಮಾಹಿತಿ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಇದನ್ನ ಅಭಿವೃದ್ಧಿಪಡಿಸಿದೆ. ಸಂಸತ್ನಲ್ಲಿ ಬಜೆಟ್ ಮಂಡನೆಯಾದ ಬಳಿಕ ಇದು ಲಭ್ಯವಾಗಲಿದೆ.
ಇದನ್ನೂ ಓದಿರಿ:ಮಹಾರಾಷ್ಟ್ರದಲ್ಲಿ ಮೈತ್ರಿ ಪಕ್ಷ ಕಾಂಗ್ರೆಸ್ಗೆ ದಿಢೀರ್ ಶಾಕ್.. ಒಂದೇ ದಿನ NCP ಸೇರಿದ 28 ಕಾರ್ಪೊರೇಟರ್ಸ್
ವೆಬ್ ಪೋರ್ಟಲ್ ಮೂಲಕ ಎಲ್ಲ ದಾಖಲೆ ಡೌನ್ಲೋಡ್ ಮಾಡಬಹುದಾಗಿದ್ದು, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮೊಬೈಲ್ ಅಪ್ಲಿಕೇಶನ್ ಬಳಕೆ ಮಾಡಬಹುದಾಗಿದೆ. ಇದಕ್ಕಾಗಿ Android ಮತ್ತು iOS ಮೊಬೈಲ್ ಹೊಂದಿರುವ ಬಳಕೆದಾರರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ.
ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಡನೆಯಾಗುತ್ತಿರುವ 10ನೇ ಬಜೆಟ್ ಇದ್ದಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡುತ್ತಿರುವ 4ನೇ ಆಯವ್ಯಯವಾಗಿದೆ.
ಈ ಸಲದ ಬಜೆಟ್ ಮೇಲೆ ಉದ್ಯಮಿಗಳು, ಸಾಮಾನ್ಯ ಜನರು ಹೆಚ್ಚಿನ ನಿರೀಕ್ಷೆಗಳನ್ನಿಟ್ಟುಕೊಂಡಿದ್ದು, ಆರೋಗ್ಯ ವಲಯ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ. ಕರ್ನಾಟಕಕ್ಕೂ ಹೆಚ್ಚಿನ ಆರ್ಥಿಕ ನೆರವು ಹರಿದು ಬರುವ ಸಾಧ್ಯತೆ ಇದ್ದು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ