ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದೆ. ಅವಶೇಷಗಳಡಿ ಆರೇಳು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಐವರನ್ನು ಹೊರತೆಗೆಯಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ 7 ಕಾರ್ಮಿಕರು ಶಂಕೆ - ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ
ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದ್ದು 6 ರಿಂದ 7 ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Under construction building collapses
ಇದನ್ನೂ ಓದಿ:ದೆಹಲಿ ಬೆಂಕಿ ಅವಘಡದಲ್ಲಿ 43 ಮಂದಿ ಸಾವು: ಕಟ್ಟಡದ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಕಾಮಗಾರಿ ನಡೆಯುತ್ತಿದ್ದಾಗಲೇ ಇಂದು ಬೆಳಗ್ಗೆ 8:50ರ ಸುಮಾರಿಗೆ ಇದ್ದಕ್ಕಿದ್ದಂತೆ ಕಟ್ಟಡ ಕುಸಿದಿದೆ. ಹೀಗಾಗಿ ಕೆಲ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಕಟ್ಟಡ ಕುಸಿದು ಕೆಲವರು ಸಾವನ್ನಪ್ಪಿದ್ದರು.