ಕಾನ್ಪುರ:ಉತ್ತರ ಪ್ರದೇಶದ ಕಾನ್ಪುರದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತದ ಅವಘಡದಲ್ಲಿ ಓರ್ವ ಮೃತಪಟ್ಟಿದ್ದಾನೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.
ಜಿಲ್ಲೆಯ ಅನ್ವರ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಲಿ ಬಜಾರ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಕಟ್ಟಡವು ಅತ್ಯಂತ ಶಿಥಿಲಾವಸ್ಥೆಯಲ್ಲಿತ್ತು. ಇದರಲ್ಲಿ ವಾಸಿಸುತ್ತಿದ್ದ ಅನೇಕ ಜನರು ಭಗ್ನಾವಶೇಷಗಳ ಅಡಿ ಸಿಕ್ಕಿಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.